ಬೆಂಗಳೂರು: ಮೌನಯೋಗಿ ಫೌಂಡೇಶನ್ ಸಹಭಾಗಿತ್ವದಲ್ಲಿ ನಡೆದ ಬೆಂಗಳೂರಿನ ಕಾನ್ಸೆಪ್ಟಿಯಾ ಸಾಫ್ಟ್‌ವೇರ್ ಟೆಕ್ನಾಲಜಿಸ್ ಪ್ರತಿಷ್ಟಿತ ಕಂಪನಿಯು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಮೌನಯೋಗಿ ಫೌಂಡೇಷನ್ ಮಾರ್ಗದರ್ಶ ಬಸವರಾಜ ಖಂಡೇರಾವ್ ತಿಳಿಸಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ಕಾನ್ಸೆಪ್ಟಿಯಾ ಸಾಫ್ಟ್‌ವೇರ್ ಟೆಕ್ನಾಲಜಿಸ್ ಪ್ರತಿಷ್ಟಿತ ಕಂಪನಿಯು ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನದ ಅಂಗವಾಗಿ ಲಿಖಿತ ಪರೀಕ್ಷೆ ನಡೆಸಿತ್ತು. ಅದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು 3ನೇ ಹಂತದ ಮೌಖಿಕ ನೇರ ಸಂದರ್ಶನದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಶಿವಕುಮಾರ ಮತ್ತು ಮಹಮ್ಮದ್ ಅಬ್ರಾಜ್ ಅನ್ಸಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಎಚ್.ಕೆ.ಇ ಅಧ್ಯಕ್ಷರಾದ ಡಾ.ಭೀಮಾಶಂಕರ ಬಿಲಗುಂದಿ ಹಾಗೂ ಕಾಲೇಜಿನ ಪ್ರಾಂಶುಪಾಲರು,ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಹ ಕಾರ್ಯದರ್ಶಿಗಳು ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿಗಳು ಶುಭ ಹಾರೈಸಿ ಅಭಿನಂದಿಸಿದ್ದಾರೆ.
ಮೌನಯೋಗಿ ಫೌಂಡೇಶನ್ ಮೌನ ತಪಸ್ವಿ ಪೂಜ್ಯ ಶ್ರೀ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮೀಜಿಯವರ ಪ್ರೇರಣೆಯಿಂದ ರೂಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಮೌನಯೋಗಿ ಫೌಂಡೇಶನ್ ವತಿಯಿಂದ ಹೈದ್ರಬಾದ್ ಕರ್ನಾಟಕ ಪ್ರದೇಶದಲ್ಲಿನ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ ತರಬೇತಿ, ಉದ್ಯೋಗ ಅವಕಾಶಗಳನ್ನು ಒದಗಿಸುವುದು,ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹಲವಾರು ಗುಣಾತ್ಮಕ ಯೋಜನೆಗಳನ್ನು ಮುಂಬರುವ ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…