ಸಸಿಗಳನ್ನು ಮಕ್ಕಳಂತೆ ಪೋಷಿಸಿ ಬೆಳೆಸಿ: ಜಯಶ್ರೀ ಮತ್ತಿಮಡು

0
27

ಶಹಾಬಾದ : ಸಸಿಗಳನ್ನು ಹಚ್ಚುವುದರ ಜೊತೆಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸಿ ಕಾಳಜಿಯಿಂದ ಬೆಳೆಸಬೇಕೆಂದು ಬಿಜೆಪಿ ಮುಖಂಡೆ ಜಯಶ್ರೀ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಬೂತ್ ನಂ. ೨೪೭, ೨೪೮ ಹಾಗೂ ೨೪೯ ರಲ್ಲಿ ಡಾ. ಶ್ಯಾಮ ಪ್ರಸಾದ ಮುಖರ್ಜಿ ರವರ ಪುಣ್ಯತಿಥಿ ಅಂಗವಾಗಿ ವೃಕ್ಷರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ಮರಗಳನ್ನು ಬೆಳೆಸಿ ಸೂಕ್ತವಾದ ಪೋಷಣೆ ಮಾಡಿದರೆ ಕಾಲಕಾಲಕ್ಕೆ ಮಳೆಯಾಗುತ್ತದೆ. ಆದರೆ ಇಂದು ದೇಶದ ಎಲ್ಲಾ ಕಡೆ ಮುಂಗಾರು ಮಳೆ ಸರಿಯಾದ ವೇಳೆಗೆ ಬರದೇ ಇರುವದಕ್ಕೆ ಈ ಪರಿಸರ ನಾಶವೇ ಕಾರಣ. ಕೇವಲ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿಕೊಂಡು ಕೂಡದೇ ಅದನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಆ ಘೋಷ ವಾಕ್ಯಕ್ಕೆ ಮನ್ನಣೆ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರದೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷೆ ಭಾಗಿರಥಿ ಗುನ್ನಾಪೂರ ಮಾತನಾಡಿ, ಪರಿಸರ ಸಮತೋಲನ ಕಾಪಾಡಲು ನಾವು ಹೆಚ್ಚು ಹೆಚ್ಚು ಸಸಿಗಳನ್ನು ಬೆಳೆಸುವ ಮುಖಾಂತರ ಪರಿಸರ ಸಂರಕ್ಷಣೆ ಮಾಡಬೇಕು. ಅಲ್ಲದೇ ಪರಿಸರ ಸಂರಕ್ಷಣೆಯಲ್ಲಿ ಸುಂದರಲಾಲ ಬಹುಗುಣ ಹಾಗೂ ಸಾಲು ಮರದ ತಿಮ್ಮಕ್ಕರ ಶ್ರಮ ಬಹಳಷ್ಟಿದೆ ಎಂದರು. ಅಲ್ಲದೇ ಹಳ್ಳಿ ಹಳ್ಳಿಗಳಿಗೂ ಈ ಪರಿಸರದ ಬಗ್ಗೆ ಅರಿವು ಮೂಡಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಶರ್ಮಾ,ನಗರ ಮಹಿಳಾ ಅಧ್ಯಕ್ಷೆ ಜಯಶ್ರೀ ಸೂಡಿ, ಮಂಡಲ ಉಪಾಧ್ಯಕ್ಷರಾದ ಶಶಿಕಲಾ ಸಜ್ಜನ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ವೃಕ್ಷರೋಹಣ ಸಂಚಾಲಕ ಹಾಗೂ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ, ಪ್ರಧಾನ ಕಾರ್ಯದರ್ಶಿ ಸಿದ್ರಾಮ ಕುಸಾಳೆ, ಉಪಾಧ್ಯಕ್ಷರಾದ ದುರ್ಗಪ್ಪ ಪವರ,ಮಹಾದೇವ ಗೊಬ್ಬುರಕರ, ಪ್ರಮುಖರಾದ ಅರುಣ ಪಟ್ಟಣಕರ, ಭೀಮರಾವ ಸಾಳೂಂಕೆ,ಸುಭಾ? ಜಾಪೂರ,ಅನೀಲ ಬೋರಗಾಂವಕರ,ಬಸವರಾಜ ಬಿರಾದಾರ,ನಗರಸಭೆ ಸದಸ್ಯರಾದ ಜಗದೇವ ಸುಭೆದಾರ, ಮೋಹನ ಗಂಟ್ಲಿ,ಸಂಜಯ ವಿಟ್ಕರ,ಅವಿನಾಶ,ಪ್ರಭು ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here