ಬಿಸಿ ಬಿಸಿ ಸುದ್ದಿ

ಶಿಶು ಪಾಲನಾ ಭತ್ಯೆ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2021-22ನೇ ಸಾಲಿನಲ್ಲಿ ಶಿಶುಪಾಲನಾ ಭತ್ಯೆ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿನ ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ಭತ್ಯೆ ಎರಡು ಹೆರಿಗೆಗಳವರೆಗೆ ಪ್ರತಿ ಹೆರಿಗೆಯ ನಂತರ 2 ವರ್ಷಗಳ ಅವಧಿಗೆ ಇರುವ ಈ ಯೋಜನೆಯನ್ನು 5 ವರ್ಷಗಳ ಅವಧಿಗೆ ವಿಸ್ತರಿಸಿದ್ದು, ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್‍ಖಾನ್ ಅವರು ತಿಳಿಸಿದ್ದಾರೆ.

ಫಲಾನುಭವಿಗಳು ಭಾರತದ ಪ್ರಜೆಯಾಗಿರಬೇಕು. ತಾಯಿ ಮತ್ತು ಮಗುವಿನ ಜಂಟಿ ಪಾಸ್‍ಪೋರ್ಟ್ ಅಳತೆಯ ಛಾಯಾಚಿತ್ರ, ವಿಕಲಚೇತನರ ಗುರುತಿನ ಚೀಟಿ/ಯು.ಡಿ.ಐ.ಡಿ. ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ದಿನಾಂಕಕ್ಕೆ ಕನಿಷ್ಠ 6 ವರ್ಷಗಳು ಕರ್ನಾಟಕದಲ್ಲಿ ವಾಸವಾಗಿರಬೇಕು ಈ ಕುರಿತು ಸಂಬಂಧಪಟ್ಟವರಿಂದ ವಾಸಸ್ಥಳ ಪ್ರಮಾಣಪತ್ರ ಸಲ್ಲಿಸಬೇಕು. ಅಂಧ ಮಹಿಳೆಯರ ಕನಿಷ್ಠ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟರಾಗಿರಬೇಕು. ಶಿಶುಪಾಲನಾ ಭತ್ಯೆಯು 2 ಹೆರಿಗೆಗೆ ಮಾತ್ರ ಸೀಮಿತವಾಗಿರುತ್ತದೆ. ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷ ರೂ. ದೊಳಗಿರಬೇಕು. ತಹಶೀಲ್ದಾರರಿಂದ ಪಡೆದ ಅದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು. ಸಹಾಯಕ್ಕಾಗಿ ಬರುವ ವ್ಯಕ್ತಿಯಿಂದ ಶಿಶು ಲಾಲನೆ, ಪಾಲನೆ, ಆರೋಗ್ಯ ಹಾಗೂ ಪೌಷ್ಠಿಕ ಆಹಾರ ಒದಗಿಸುವ ಕುರಿತು ಮುಚ್ಚಳಿಕೆ ಸಲ್ಲಿಸಬೇಕು. ಶಿಶು ಪಾಲನಾ ಭತ್ಯೆಯನ್ನು ಮಗುವಿನ ಆರೋಗ್ಯ, ಪೌಷ್ಠಿಕ ಆಹಾರ ಮತ್ತು ಪಾಲನೆ ಮಾತ್ರ ಉಪಯೋಗಿಸಲಾಗುತ್ತದೆ ಎಂದು ದೃಢೀಕರಣ ಸಲ್ಲಿಸಬೇಕು.

ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2021ರ ಜುಲೈ 30ರ ಸಂಜೆ 5.30 ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾ ವಿಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿಯನ್ನು ಮತ್ತು ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ 08472-235222 ಅಥವಾ ಸಂಬಂಧಪಟ್ಟ ಅಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿನ ವಿಕಲಚೇತನರ ತಾಲೂಕಾ ನೋಡಲ್ ಅಧಿಕಾರಿಗಳನ್ನು ಇದಲ್ಲದೇ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಮ್.ಆರ್.ಡಬ್ಲ್ಯೂ) ತಾಲೂಕಾ ಪಂಚಾಯತ್ ಕಚೇರಿ ಅಫಜಲಪೂರ-ಮೊಬೈಲ್ ಸಂಖ್ಯೆ 9448808141, ಆಳಂದ-9741792291, ಚಿತ್ತಾಪೂರ-9845204328, ಚಿಂಚೋಳಿ-9880671171, ಜೇವರ್ಗಿ-9741875881, ಕಲಬುರಗಿ-9972079714 ಹಾಗೂ ಸೇಡಂ-9902417925 ಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

33 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago