ಬೆಂಗಳೂರು ಜುಲೈ 1: ಲಿಥಿಯನ್ -ಅಯಾನ್ ಸೆಲ್ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ಇಂದು ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್ ಸೆಲ್ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್ -ಅಯಾನ್ ಸೆಲ್ (Li-Ion) ಸೆಲ್ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ ಕಂಪನಿ ನೂರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ಹೊಂದಿರುವ ಹಾಗೂ ಲಿಥೀಯಮ್ ಬ್ಯಾಟರಿ ಸೆಲ್ ಉತ್ಪಾದನೆ ಹಾಗೂ ತಂತ್ರಜ್ಞಾನ ಹೊಂದಿರುವ ಪ್ರಮುಖ ಕಂಫನಿಯಾಗಿದೆ. ರಾಜ್ಯದಲ್ಲಿ ಈ ಕಂಪನಿಯ 4015 ಕೋಟಿ ರೂಪಾಯಿಗಳ ಹೂಡಿಕೆಯಿಂದಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.
ಕಂಪನಿ ರಾಜ್ಯದಲ್ಲಿ 5 GWh ಪ್ಲಾಂಟನ್ನು ಸ್ಥಾಪಿಸಲಿದ್ದು, ಮುಂದಿನ ವರ್ಷ ಇದರ ಕಾಮಗಾರಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಇತ್ತೀಚಿಗೆ ಹೊರತಂದಿರುವ ನೂತನ ಇಎಸ್‌ಡಿಎಂ ನೀತಿ ಹಾಗೂ ಎಲೆಕ್ಟ್ರಿಕ್ ವೆಹಿಕಲ್ ನೀತಿಯಲ್ಲಿನ ಅಮೂಲಾಗ್ರ ಬದಲಾವಣೆಯ ಮೂಲಕ ಹಸಿರು ಭವಿಷ್ಯಕ್ಕೆ ಮುನ್ನಡಿಯನ್ನು ಬರೆದಿದ್ದೇವೆ. ಪರಿಸರ ಮಾಲಿನ್ಯ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೆಲ್ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರವಹಿಸಲಿದೆ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಅಗತ್ಯವಿರುವ ಸಹಕಾರ ರಾಜ್ಯ ಸರಕಾರದಿಂದ ಈಗಾಗಲೇ ನೀಡಲಾಗುತ್ತಿದೆ. ಪ್ರಮುಖ ಕಂಪನಿ ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವುದರಿಂದ ಇನ್ನಷ್ಟು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಾಧ್ಯವಾಗಲಿದೆ. ರಾಜ್ಯದಲ್ಲಿ ಕೈಗಾರಿಕೆಯ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರಗಳನ್ನು ನಮ್ಮ ಸರಕಾರ ನೀಡಲು ಸಿದ್ದವಿದೆ ಎಂದು ಇದೇ ಸಂಧರ್ಭದಲ್ಲಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಸಿ4ವಿ ಕಂಪನಿಯ ಸಿಇಓ ಶೈಲೇಶ್ ಉಪ್ರೇತಿ, ಉಪಾಧ್ಯಕ್ಷ ಕುಲದೀಪ್ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಇನ್‌ವೆಸ್ಟ್ ಕರ್ನಾಟಕ ಫೋರಂ ನ ಸಿಓಓ ಬಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…