ಬಿಸಿ ಬಿಸಿ ಸುದ್ದಿ

ಸುರಪುರ ಪೊಲೀಸ್ ಉಪ ವಿಭಾಗ: ಕೊರೊನಾ ಸಂಚಾರಿ ನಿಯಮಗಳ ಜಾಗೃತಿ ಜಾಥಾ

ಸುರಪುರ: ನಗರದಲ್ಲಿ ಸುರಪುರ ಪೊಲೀಸ್ ಉಪ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಹಾಗು ಕೊರೊನಾ ಕುರಿತು ಜನ ಜಾಗೃತಿ ಜಾಥಾ ನಡೆಸಲಾಯಿತು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಾಥಾದ ಕುರಿತು ಸುರಪುರ ಪೊಲೀಸ್ ಉಪಾಧೀಕ್ಷಕ ವೆಂಕಟೇಶ ಹುಗಿಬಂಡಿ ಮಾತನಾಡಿ,ಕೊರೊನಾ ಲಾಕ್‌ಡೌನ್ ತೆರವುಗೊಳಿಸಲಾಗಿದೆ ಎಂದು ಜನರು ಕೋವಿಡ್ ನಿಯಮಗಳನ್ನು ಮರೆತು ಓಡಾಡುತ್ತಿರುವುದು ಕಂಡು ಬರುತ್ತಿದೆ.ಆದರೆ ಸಾರ್ವಜನಿಕರು ಕೊರೊನಾ ನಿಯಮಗಳನ್ನು ಪಾಲಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಅನಾವಶ್ಯಕವಾಗಿ ಹೊರಗಡೆ ಓಡಾಡಬೇಡಿ ಎಂದರು.ಅಲ್ಲದೆ ಜನರು ಅನಾವಶ್ಯಕವಾಗಿ ಗುಂಪಾಗಿ ಸೇರಬೇಡಿ ಹಾಗು ಸಾಮಾಜಿಕ ಅಂತರವನ್ನು ಪಾಲಿಸಲು ಸಲಹೆ ನೀಡಿದರು.ಅಲ್ಲದೆ ಸಂಚಾರಿ ನಿಯಮಗಳನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತಗಳು ತಪ್ಪಲಿವೆ.ಇನ್ನು ವಾಹನ ಚಾಲನಾ ಪರವಾನಿಗೆಯನ್ನು ಪಡೆಯದಿರುವವರು ಪರವಾನಿಗೆ ಪಡೆಯುವ ಮೂಲಕ ದಂಡದಿಂದ ತಪ್ಪಿಸಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.

ಇದಕ್ಕು ಮುನ್ನ ಶ್ರೀ ಪ್ರಭು ಕಾಲೇಜು ಮೈದಾನದಿಂದ ಬಸ್ ನಿಲ್ದಾಣದ ಮೂಲಕ ಮಹಾತ್ಮ ಗಾಂಧಿ ವೃತ್ತದಿಂದ ದರಬಾರ ರಸ್ತೆ,ಸರದಾರ ವಲ್ಲಭಬಾಯಿ ರಸ್ತೆ ಮೂಲಕ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮೂಲಕ ಹನುಮಾನ ಟಾಕೀಸ್ ರಸ್ತೆಯಿಂದ ಮಹಾತ್ಮ ಗಾಂಧಿ ವೃತ್ತದ ವರೆಗೆ ಪೊಲೀಸ್ ಪ್ರಭಾತಪೇರಿ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸುರಪುರ ಠಾಣೆ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್,ಶಹಾಪುರ ಠಾಣೆ ಸಿಪಿಐ ಚನ್ನಯ್ಯ ಹಿರೇಮಠ,ಭೀಮರಾಯನಗುಡಿ ಠಾಣೆ ಸಿಪಿಐ ಶ್ರೀನಿವಾಸ ಅಲ್ಲಾಪುರ,ಹುಣಸಗಿ ಠಾಣೆ ಸಿಪಿಐ ದೌಲತ್ ಎನ್.ಕೆ ಹಾಗು ಸುರಪುರ ಪೊಲೀಸ್ ಉಪ ವಿಭಾಗದ ಎಲ್ಲಾ ಠಾಣೆಗಳ ಪಿಎಸ್‌ಐಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

9 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

9 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

9 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

9 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

9 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

9 hours ago