ಕಲಬುರಗಿ: ಆತ್ಮ ನಿರ್ಭರ ಭಾರತ ಕಾರ್ಯಕ್ರಮದಡಿ ಪಶುಸಂಗೋಪನೆ ಚಟುವಟಿಕೆಗಳಾದ ಡೈರಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮಾಂಸ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ಪಶು ಆಹಾರ ತಯಾರಿಕಾ ಘಟಕಗಳ ಸ್ಥಾಪನೆಗೆ ಉತ್ತೇಜನ ನಿಡಲಾಗುತ್ತಿದ್ದು, ಇದಕ್ಕಾಗಿ ವಿವಿಧ ವರ್ಗಗಳ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆತ್ಮ ನಿರ್ಭರ ಭಾರತ ಕಾರ್ಯಕ್ರಮದಡಿ ಪಶುಸಂಗೋಪನೆ ವಲಯದಲ್ಲಿ, ಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆ (Ahidf fund) ಪ್ರಾರಂಭಿಸಿದ್ದು, ಜಿಲ್ಲೆಗೆ 30 ಗುರಿ ನಿಗದಿಪಡಿಸಲಾಗಿದ್ದು, ಪಿ.ಪಿ.ಪಿ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಈ ಮೇಲ್ಕಂಡ ಘಟಕಗಳ ಸ್ಥಾಪನೆ ಹಾಗೂ ವಿಸ್ತರಣೆಗೆ ಅವಕಾಶವಿದ್ದು, ರಾಷ್ಟ್ರೀಕೃತ ಬ್ಯಾಂಕಗಳ ಮೂಲಕ ಸಾಲ ಸೌಲಭ್ಯ ಇರುತ್ತದೆ.
ಅರ್ಹ ಫಲಾನುಭವಿಗಳು www.ahidf.udyamimitra.in ವೆಬ್‍ಸೈಟ್‍ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿಯ ತಾಂತ್ರಿಕ ಶಾಖೆಗೆ ಅಥವಾ ಸಂಬಂಧಪಟ್ಟ ಆಯಾ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…