ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯವನ್ನು ಪ್ರಧಾನ ಮಂತ್ರಿ ಜನವಿಕಾಸ ಯೋಜನೆಯಲ್ಲಿ ಸೇರ್ಪಡೆಗೊಳಿಸಬೇಕು ಮತ್ತು ಕಲಬುರಗಿ ಜಿಲ್ಲೆಯ ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಭೇಟಿ ನೀಡಿ ಪರಿಶೀಲಿಸಬೇಕೆಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರ ನೇತೃತ್ವದ ನಿಯೋಗದಲ್ಲಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಹಿರಿಯ ಮುಖಂಡ ಬಿಜೆಪಿ ಕಾರ್ಯಾಕಾರಣಿ ಸದಸ್ಯರಾದ ಕೆ.ಎಮ್ ಬಾರಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಾಮ ನಿರ್ದೇಶಿತ ನಿರ್ದೇಶಕರಾದ ಸದ್ದಾಮ್ ಭೇಟಿ ನೀಡಿದ್ದರು.
ಕಲಬುರಗಿ ಜಿಲ್ಲೆಯ ಸ್ಲಾಮ್ ಪ್ರದೇಶ, ವಸತಿ ನಿಲಯ, ಸಮುದಾಯ ಭವನ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ, ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆ ಆಲಿಸಬೇಕೆಂದು ಶ್ರೀಮಂತ ಪಾಟೀಲ್ ಅವರಿಗೆ ಮನವಿ ಮಾಡಲಾಯಿತು.