ಬಿಸಿ ಬಿಸಿ ಸುದ್ದಿ

ಕಲಬುರಗಿ: ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ 7 ವಾಹನಗಳು ಬಹಿರಂಗ ಹರಾಜು

ಕಲಬುರಗಿ: ನಗರದ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಸುಮಾರು ವರ್ಷಗಳಿಂದ ಮಾಲೀಕರಿಲ್ಲದ ಮತ್ತು ಅನುಪಯುಕ್ತ ಸ್ಥೀತಿಯಲ್ಲಿರುವ ವಿವಿಧ ಕಂಪನಿಯ ಮೋಟಾರ ಸೈಕಲ್‌ಗಳನ್ನು ೭ನೇ ಜುಲೈ ೨೦೨೧ ರಂದು ಬೆಳಿಗ್ಗೆ ೧೧ ಗಂಟೆಗೆ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರೀಯೆಯನ್ನು ಪೋಲಿಸ್ ಆಯುಕ್ತರ ಆದೇಶದ ಮೇರೆಗೆ ನಡೆಯಲಿದೆ.

ವಿವಿಧ ಕಂಪನಿಯ ಮೋಟಾರ್ ಸೈಕಲ್‌ಗಳು ಠಾಣೆಯಲ್ಲಿರುವ ಯಥಾ ಸ್ಥಿತಿಯಲ್ಲಿಯೇ ಒಟ್ಟು ೨೯ ಮೋಟಾರ್ ಸೈಕಲ್‌ಗಳು ಉಳಿದುಕೊಂಡಿದ್ದು, ಸಧ್ಯದ ಸ್ಥೀತಿಯಲ್ಲಿಯೇ ಮೋರಾಟರ್ ಸೈಕಲ್‌ಗಳ ವಿಲೇವಾರಿ ಮಾಡುವ ಸಲುವಾಗಿ ಗೌರವಾನ್ವಿತ ೪ನೇ ಅಪರ ಜೆಎಮ್.ಎಫ್‌ಸಿ ನ್ಯಾಯಾಲಯದಿಂದ ಅಧಿಕೃತವಾಗಿ ಅನುಮತಿಯನ್ನು ಪಡೆದುಕೊಳ್ಳಲಾಗಿದೆ. ಆದಕಾರಣ ನಿಗಧಿಪಡಿಸಲಾಗಿರುವ ದಿನಾಂಕದಂದು ಆಸಕ್ತಿಯುಳ್ಳವರು ಮುಂಚಿತವಾಗಿ ಠಾಣೆಯಲ್ಲಿಯೇ ಹೆಸರು ವಿಳಾಸವನ್ನು ನಮೂದಿಸಿ ಬಹಿರಂಗ ಹರಾಜು ದಿವಸ ಹಾಜರಿರುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago