ಶಹಾಬಾದ :ಪರಿಸರವನ್ನು ಉಳಿಸಿ ಬೆಳೆಸದಿದ್ದಲ್ಲಿ ಮುಂದಿನ ಪೀಳಿಗೆಗೆ ನಾವೇ ವಿಷ ಉಣಿಸದಂತೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಆತಂಕ ವ್ಯಕ್ತಪಡಿಸಿದರು.
ಅವರು ರವಿವಾರ ಭಂಕೂರ ಗ್ರಾಮದಲ್ಲಿ ಬಿಜೆಪಿಯಿಂದ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸಸಿಗೆ ನೀರುಣಿಸಿ ಮಾತನಾಡಿದರು. ಪರಿಸರ, ಅಂತರ್ಜಲವನ್ನು ನಾವು ಮುಂದಿನ ಪೀಳಿಗೆಗೆ ಉಳಿಸಬೇಕಿದೆ.ಪರಿಸರವನ್ನು ಉಳಿಸುವ ಕಾರ್ಯ ಸರ್ಕಾರದ್ದು ಎಂದು ಸರ್ಕಾರದ ಮೇಲೆ ಭಾರ ಹಾಕಿ ಕೂಡದೇ ನಮ್ಮ ನಮ್ಮ ಪಾತ್ರವನ್ನು ನಿಭಾಯಿಸಬೇಕಾಗಿದೆ.ನಮ್ಮ ಮನೆ, ನಿವೇಶನದ ಅಕ್ಕ ಪಕ್ಕದಲ್ಲಿನ ಖಾಲಿ ಸ್ಥಳ, ಸರ್ಕಾರಿ ಜಮೀನಿನಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಕೆಲಸ ಆಗಬೇಕೆಂದು ತಿಳಿಸಿದರು.
ಚಿತ್ತಾಪೂರ ಬಿಜೆಪಿ ಅಧ್ಯಕ್ಷ ನೀಲಕಂಠ ಪಾಟೀಲ ಮಾತನಾಡಿ, ಸಸಿಗಳನ್ನು ನೆಡುವುದರಿಂದ ಶುದ್ಧ ಆಮ್ಲಜನಕ ಸಿಗಲಿದೆ.ಕಾಲಕಾಲಕ್ಕೆ ಮಳೆಯಾಗಲಿದೆ. ಅಂತರ್ಜಲ ವೃದ್ಧಿಯಾಗುವುದರ ಜತೆಗೆ ಜೀವಜಲದ ಸಂಗ್ರಹವಾಗುತ್ತದೆ.ಕೊರೊನಾ ಸಂದರ್ಭದಲ್ಲಿ ಆಮ್ಲಜನಕ ಮಹತ್ವ ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ.ಆದ್ದರಿಂದ ಸಸಿಗಳನ್ನು ನೆಡುವುದರ ಮೂಲಕ ಮುಂದಿನ ಪೀಳಿಗೆಗೆ ಆರೋಗ್ಯಯುತ ಜೀವನ ಸಾಗಿಸಲು ಅನುವು ಮಾಡಿಕೊಡಬೇಕಾಗಿದೆ ಎಂದರು.
ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್, ಶರಣಪ್ಪ ಸಣಮೋ, ಮಲ್ಲಿಕಾರ್ಜುನ ಇಟಗಿ, ನಿಂಗಣ್ಣ ಪೂಜಾರಿ, ಭರತ್ ಮುತ್ತಗಾ, ಸಂತೋಷ ಕಲಶೆಟ್ಟಿ, ಚಂದ್ರಕಾಂತ ಚನ್ನೂರ, ಪವನ ಶಿರಗೊಂಡ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…