ಶಹಾಬಾದ: ನಗರೋತ್ಥಾನ ಮೂರನೇ ಹಂತದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತ ಮತ್ತು ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗೆ ನಡೆಯುತ್ತಿರುವ ಕಳಪೆ ಕಾಮಗಾರಿಯನ್ನು ವಿರೋಧಿಸಿ ಎಸ್‌ಯುಸಿಐ(ಸಿ) ಸಮಿತಿ ವತಿಯಿಂದ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಯುಸಿಐ(ಸಿ) ಸಮಿತಿ ಸದಸ್ಯ ರಾಘವೇಂದ್ರ. ಎಮ್.ಜಿ, ನಗರದ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದವರೆಗಿನ ಮತ್ತು ಬಸವೇಶ್ವರ ವೃತ್ತದಿಂದ ಶಾಸ್ತ್ರಿ ವೃತ್ತದವರೆಗೆ ನಡೆಯುತ್ತಿರುವ ಡಾಂಬರೀಕರಣ ರಸ್ತೆ ಕಳಪೆ ಮತ್ತು ಅವೈಜ್ಞಾನಿಕವಾಗಿದ್ದು, ಈ ಬಗ್ಗೆ ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು.ಅಲ್ಲದೇ ಗುತ್ತಿಗೆದಾರನಿಗೆ ಯಾವುದೇ ಕಾರಣಕ್ಕೂ ಬಿಲ್ ಪಾವತಿ ಮಾಡಕೂಡದು. ನಗರೋತ್ಥಾನದ ಮೂರನೇ ಹಂತದಲ್ಲಿ ಸಾಕಷ್ಟು ಅನುದಾನ ಬಿಡುಗಡೆಯಾದರೂ ಕಾಮಗಾರಿ ಮಾತ್ರ ಕಳಪೆಯಾಗಿದೆ.
ಈಗಾಗಲೇಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದವರೆಗಿನ ಕಳಪೆ ರಸ್ತೆಗೆ ಈ ಹಿಂದೆ ೨ ಕೋಟಿ ರೂ. ಬಿಲ್ ಪಾವತಿ ಮಾಡಲಾಗಿದೆ.ಈಗ ಅದೇ ರಸ್ತೆಗೆ ಮತ್ತೆ ೨ಕೋಟಿ ೧೭ ಲಕ್ಷ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ.ಅದು ಕೂಡ ಸಂಪೂರ್ಣ ಹದಗೆಟ್ಟಿದ್ದರೂ ಗುತ್ತಿಗೆದಾರನ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೋಟಿಗಟ್ಟಲೇ ಹಣ ಸುರಿದರೂ ರಸ್ತೆ ಮಾತ್ರ ಹರಿದು ಚಿಂದಿಯಾಗಿದೆ. ಹೆಜ್ಜೆ ಹೆಜ್ಜೆಗೂ ತಗ್ಗುಗಳು ಉಂಟಾಗಿವೆ. ಈಗಾಗಲೇ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಾದ ಪಿಡಿ,ಇಇ, ಎಇಇ ಅವರು ಪರಿಶೀಲಿಸಿ ಸಂಪರ್ಣ ಕಾಮಗಾರಿ ಕಳಪೆ ಮಟ್ಟದಾಗಿದ್ದು, ಅದನ್ನು ತೆಗೆಸಿ ಮತ್ತೊಮ್ಮೆ ನಿರ್ಮಾಣ ಮಾಡಲು ತಿಳಿಸಿ ಹೋಗಿದ್ದಾರೆ.
ಆದರೆ ಗುತ್ತಿಗೆದಾರ ರಸ್ತೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ.ಆದ್ದರಿಂದ ಜಿಲ್ಲಾಧಿಕಾರಿಗಳು ಒಮ್ಮೆ ನಗರದ ಕಾಮಗಾರಿ ವೀಕ್ಷಣೆ ಮಾಡಬೇಕು.ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕು. ಸಂಪೂರ್ಣ ಗುಣಮಟ್ಟದ ಕಾಮಗಾರಿ ಕೈಗೊಂಡ ನಂತರವೇ ಬಿಲ್ ಪಾವತಿ ಮಾಡಬೇಕು. ಒಂದು ವೇಳೆ ಬಿಲ್ ಪಾವತಿ ಮಾಡಿದರೇ ಉಗ್ರವಾದ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯದರ್ಶಿ ಗಣಪತರಾವ.ಕೆ.ಮಾನೆ,ಜಗನ್ನಾಥ.ಎಸ್.ಹೆಚ್, ಗುಂಡಮ್ಮ ಮಡಿವಾಳ, ರಾಜೇಂದ್ರ ಆತನೂರ್,ಸಿದ್ದು ಚೌದ್ರಿ, ರಮೇಶ ದೇವಕರ್, ನೀಲಕಂಠ ಹುಲಿ, ತಿಮ್ಮಯ್ಯ ಮಾನೆ,ಶಿವಕುಮಾರ.ಇ.ಕೆ ಸೇರಿದಂತೆ ಅನೇಕರು ಇದ್ದರು.