ಝಳಕಿ (ಬಿ)ಯಲ್ಲಿ ಸಸಿ ನೆಡುವ ಕಾರ್ಯಕ್ಕೆ ಸೇಡಂ ಚಾಲನೆ

0
15

ಆಳಂದ: ತಾಲೂಕಿನ ಝಳಕಿ (ಬಿ) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕøತಿಕ ಸಂಘ ಹಾಗೂ ಎಸ್‍ಆರ್‍ಜಿ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಿದ್ದ ವೃಕ್ಷಾರೋಹಣವನ್ನು ರಾಜ್ಯ ಸಭಾ ಸದಸ್ಯ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರು ಸಸಿ ನೆಟ್ಟು ನೀರುಣಿಸಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಗ್ರಾಮಾಭಿವೃದ್ಧಿಗೆ ಪಕ್ಷಭೇದ ಮರೆತು ಎಲ್ಲರು ಒಂದಾಗಿ ಒಳ್ಳೆಯ ಕಾರ್ಯಗಳನ್ನು ಕೈಗೊಳ್ಳಬೇಕು. ಪರಿಸರ ಸಂರಕ್ಷಣೆ, ಕೃಷಿ ಚಟುವಟಿಕೆ ಮೂಲಕ ಗ್ರಾಮದಲ್ಲಿ ದುಶ್ಚಟಗಳನ್ನು ಹತ್ತಿಕ್ಕಿ ಮಾದರಿ ಗ್ರಾಮವನ್ನಾಗಿಸಲು ಪಣತೊಡಬೇಕು. ಯುವಕರು ದಾರಿ ತಪ್ಪದೆ ಕೃಷಿ, ಹೈನುಗಾರಿಕೆ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನ ಸಾಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

Contact Your\'s Advertisement; 9902492681

ಯಳಸಂಗಿ ಮಠದ ಶ್ರೀ ಪ್ರಣಾವನಂದ ಮಹಾಸ್ವಾಮಿಗಳು ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಏನೆಲ್ಲ ಬೇಕಾಗಿದೆ ಅದನ್ನು ಮಾಡಲು ಇಂದು ಪ್ರತಿಯೊಬ್ಬರು ಮುಂದಾಗಬೇಕಾಗಿದೆ. ಹಸಿರು ಪರಿಸರ, ಹೈನುಗಾರಿಕೆ, ಕೃಷಿ ಮೂಲಕ ಆರ್ಥಿಕ ಅಭಿವೃದ್ಧಿಗೆ ಹೆಜ್ಜೆ ಹಾಕಬೇಕು. ಇಂಥ ಕಾರ್ಯಗಳಿಗೆ ಬಸವರಾಜ ಪಾಟೀಲ ಸೇಡಂ ಅವರು ಕಲ್ಯಾಣ ಕರ್ನಾಟಕದಲ್ಲಿ ಸದಾ ಪ್ರಯತ್ನಿಸುತ್ತಲೇ ಬಂದಿದ್ದಾರೆ ಅವರ ಮಾರ್ಗದರ್ಶನದಲ್ಲಿ ಹೆಚ್ಚಿನ ಕಾರ್ಯಗಳಾಗುತ್ತಿದ್ದು ಸಾರ್ವಜನಿಕರು ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಎಸ್‍ಆರ್‍ಜಿ ಫೌಂಡೇಷನ್ ಕಾರ್ಯದರ್ಶಿ ಹರ್ಷಾನಂದ ಗುತ್ತೇದಾರ ಅವರು ಮಾತನಾಡಿ, ಈ ಎರಡು ಸಂಸ್ಥೆಗಳಡಿ ಜನಪಯೋಗಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ನೆಟ್ಟಗಿಡಗಳನ್ನು ಸಂರಕ್ಷಣೆ ಮಾಡುವ ಮೂಲಕ ಸ್ಥಳೀಯರು ಗ್ರಾಮದ ಪರಿಸರವನ್ನು ಹಸಿರೀಕರಣಗೊಳಿಸಲು ಮುಂದಾಗಬೇಕು ಎಂದರು.

ವೇದಿಕಯ ಮೇಲೆ ಶಿವಶಾಂತ ರೆಡ್ಡಿ, ಪ್ರಾದೇಶಿಕ ಅರಣ್ಯಾಧಿಕಾರಿ ಜಗನಾಥ ಕೊರಳ್ಳಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಚಂದ್ರಶೇಖರ ಹೇಮಾ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here