ಕಲಬುರಗಿ: ವಿಜಯ ಭಾಸ್ಕರ ಸಮಿತಿಯ ಆಡಳಿತ ಸುಧಾರಣೆ ವರದಿಯಂತೆ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡುವುದು ಆಡಳಿತ ವಿಕೇಂದ್ರಿಕರಣ ವ್ಯವಸ್ಥೆಗೆ ವಿರುದ್ಧವಾಗಿದೆ. ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದಂತಾ ನಮ್ಮ ಭಾಗದ ಅಭಿವೃದ್ಧಿಗೆ ಇದು ಮಾರಕವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವಿಜಯ ಭಾಸ್ಕರ ಸಮಿತಿಯ ಆಡಳಿತ ಸುಧಾರಣೆಯ ವರದಿಯಲ್ಲಿ ಬಹಳಷ್ಟು ಅಂಶಗಳು ಜನಪರ ಆಡಳಿತಕ್ಕೆ ಪೂರಕವಾಗಿವೆ ಅದಕ್ಕೆ ನಮ್ಮ ಸಮತಿ ಸ್ವಾಗತಿಸುತ್ತದೆ ಆದರೆ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡಿ ಕಂದಾಯ ಆಯುಕ್ತಾಲಯದ ರಚನೆಯ ಶಿಫಾರಸ್ಸು ರಾಜಧಾನಿ ಬೆಂಗಳೂರಿಗೆ ಅಧಿಕಾರ ಕೇಂದ್ರೀರಣ ಮಾಡಿದಂತಾಗುವದು. ರಾಜಧಾನಿ ಬೆಂಗಳೂರಿನಿಂದ ಬಹು ದೂರವಿರುವ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಇದರಿಂದ ಬಹಳ ತೊಂದರೆ ಆಗುವುದರಲ್ಲಿ ಸಂಶಯವೆ ಇಲ್ಲಾ ಸಮಿತಿ ಇದಕ್ಕೆ ಬಲವಾಗಿ ಖಂಡಿಸುತ್ತದೆ.
ಸರಕಾರ ಪ್ರಾದೇಶಿಕ ಆಯುಕ್ತರ ಕಛೇರಿ ರದ್ದು ಮಾಡುವ ಶಿಫಾರಸ್ಸು ಕೈ ಬಿಡಬೇಕು. ಈ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಚಿವರು, ಸಂಸದರು, ಶಾಸಕರು ಗಂಭೀರವಾಗಿ ಪರಿಗಣಿಸಲು ಸಮಿತಿ ಒತ್ತಾಯಿಸುತ್ತದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…