ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಉಪಯೋಗಕ್ಕಾಗಿ ತ್ರಿಚಕ್ರ ಸೈಕಲ್‍ಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಅರ್ಹ ವಿಕಲಚೇತನರು ಅವಶ್ಯಕ ದಾಖಲೆಗಳೊಂದಿಗೆ ಕಚೇರಿ ಸಮಯದಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಿ ತ್ರಿಚಕ್ರ ಸೈಕಲ್‍ಗಳನ್ನು ಪಡೆಯಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ್ ಹುಸೇನ್ ಖಾನ್ ಅವರು ತಿಳಿಸಿದ್ದಾರೆ.
ಅರ್ಹ ವಿಕಲಚೇತನರು ವೈದ್ಯಕೀಯ ಪ್ರಮಾಣಪತ್ರದ ಜಿರಾಕ್ಸ್ ಪ್ರತಿ ಹಾಗೂ ಆಧಾರ್ ಕಾರ್ಡ್ ಜಿರಾಕ್ಸ್ ಪ್ರತಿ ದಾಖಲಾತಿಗಳೊಂದಿಗೆ ಭೇಟಿ ನೀಡಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿ ದೂರವಾಣಿ (ವಿಕಲಚೇತನರ ಸಹಾಯವಾಣಿ) 08472-235222ಗೆ ಸಂಪರ್ಕಿಸಲು ಕೋರಲಾಗಿದೆ.