ಬಿಸಿ ಬಿಸಿ ಸುದ್ದಿ

ಕಲಬುರಗಿ: ಜುಲೈ 8 ಹಾಗೂ 9 ರಂದು ಉದ್ಯೋಗ ಮೇಳ

ಕಲಬುರಗಿ: ಮೆರಿಟ್ಯೂಡ್ ಸ್ಕೀಲ್ ಡೆವಲಪ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ 8 ಹಾಗೂ 9 ರಂದು ಎರಡು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕೆಳಕಂಡ ಹುದ್ದೆಯ ನೇಮಕಾತಿಗಾಗಿ ಕಲಬುರಗಿ ಎಂಎಸ್‍ಕೆ ಮಿಲ್ ರಸ್ತೆಯ ಬಸ್ ಡಿಪೋ ನಂ.1 ರ ಎದುರುಗಡೆಯಿರುವ (ಪುರುಷ) ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ವಾಣಿಜ್ಯ ಸೇವಾ ಅಧಿಕಾರಿ (ಕ್ಷೇತ್ರ ಕಾರ್ಯ) ಹುದ್ದೆಗೆ ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ ಹಾಗೂ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಮಾಸಿಕ 15,000 ರಿಂದ 18,000 ರೂ. ವೇತನ ನೀಡಲಾಗುತ್ತದೆ.

ಅರ್ಹ ಪುರುಷ ಅಭ್ಯರ್ಥಿಗಳನ್ನು ಮೇಲ್ಕಂಡ ದಿನದಂದು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8660996093, 7483155345 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

17 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago