ಕಲಬುರಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಕಲಬುರಗಿ ಪ್ರಾದೇಶಿಕ ಕಚೇರಿಯ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ್ ಆರ್. ನಿರಾಣಿ ಅವರು ಬುಧವಾರ ಉದ್ಘಾಟಿಸಿದರು.
ನಗರದ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರವರ ಕಚೇರಿ ಆವರಣದಲ್ಲಿ ಕೆ.ಆರ್.ಇ.ಡಿ.ಎಲ್. ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿ, ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು, ಜಿಲ್ಲೆಯಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಕಲಬುರಗಿ ಪ್ರಾದೇಶಿಕ ಕಚೇರಿ ಪುನಃ ಕಾರ್ಯಾರಂಭಿಸಲಿದೆ. ಸದ್ಯ ಫಿರೋಜಾಬಾದ್ ಹಾಗೂ ಆಫಜಲಪೂರದಲ್ಲಿ ತಲಾ 500 ಮೆಗಾ ವ್ಯಾಟ್‍ನ ಸೋಲಾರ್ ಪ್ಲಾಂಟ್ ಸ್ಥಾಪಿಸಲಾಗುವುದು. ಇದಲ್ಲದೆ ನೂತನವಾಗಿ 8 ರಿಂದ 10 ಹೊಸ ಯೋಜನೆಗಳನ್ನು ಜಿಲ್ಲೆಗೆ ತರುವ ಯೋಜನೆ ಹಾಕ್ಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಮರಳು ದಂಧೆಯನ್ನು ನಿಲ್ಲಿಸಲಾಗಿದೆ. ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗುವುದು. ಇದರ ಮೂಲಕ 50 ಕೆಜಿಯ ಸ್ಯಾಂಡ್ ಬ್ಯಾಗ್ ಮೂಲಕ ಮರಳನ್ನು ಸಕ್ರಮವಾಗಿ ಮಾರಾಟ ಮಾಡಲಾಗುವುದು ಎಂದ ಅವರು ಆದಷ್ಟು ಬೇಗ ಬಳ್ಳಾರಿಯಲ್ಲಿ ಸ್ಕೂಲ್ ಆಫ್ ಮೈನಿಂಗ್ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
ಆಗಸ್ಟ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್ ಅವರು, ಜಿಲ್ಲೆಯಲ್ಲಿ 500 ಮೆಗಾ ವ್ಯಾಟ್‍ನ 2 ಸೋಲಾರ್ ಪ್ಲಾಂಟ್ ಜೊತೆಗೆ 2000 ಸೋಲಾರ್ ವಾಟರ್ ಪಂಪ್ ಸೆಟ್‍ಗಳನ್ನು ಜಿಲ್ಲೆಗೆ ತರಲಾಗುತ್ತಿದೆ. ಇದಲ್ಲದೆ ವಿಶೇಷವಾಗಿ ನಗರದ ಹೃದಯ ಭಾಗದಲ್ಲಿರುವ ಅಪ್ಪನ ಕೆರೆಗೆ 2 ಮೆಗಾ ವ್ಯಾಟ್‍ನ ಫೆÇ್ಲೀಟಿಂಗ್ ಸೋಲಾರ್ ಕೂಡ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮೂಡ, ಎಂ.ವೈ.ಪಾಟೀಲ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ್ ಜಿ. ನಮೋಶಿ, ಎನ್ ರವಿಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ. ಟೆಂಗಳಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿಲಾ ್ಲಪಂಚಾಯತ್ ಸಿಇಓ ಡಾ. ದಿಲೀμï ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.