ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಮರುನಾಮಕರಣ: ಡಿಸಿಎಂ ಸವದಿಗೆ ನರಿಬೋಳ್ ಅಭಿನಂದನೆ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಇದ್ದ ನಿಗಮದ ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಇಂದು ಅಧಿಕೃತವಾಗಿ ಮರುನಾಮಕರಣ ಮಾಡಿದ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರನ್ನು ಜೇವರ್ಗಿ ಕ್ಷೇತ್ರದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಅವರು ಅಭಿನಂದನೆಗಳು ಸಲ್ಲಿಸಿದರು.

ಹೈದರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟು ಈ ಮೊದಲು ಇದ್ದ ಹೈದರಾಬಾದ್ ಕರ್ನಾಟಕ ಹೆಸರುಗಳನ್ನು, ೧೨ ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆಗಾಗಿ ಕಲ್ಯಾಣ ಕರ್ನಾಟಕದಲ್ಲಿ ಕ್ರಾಂತಿ ಮಾಡಿದ ಅಣ್ಣ ಬಸವಣ್ಣನವರ ಕ್ರಾಂತಿಯ ಸಂದೇಶಗಳು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಬದಲಾವಣೆಯನ್ನು ಮಾಡಿರುವ ಸಾರಿಗೆ ಸಚಿವರು, ರಾಜ್ಯದ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರಿಗೆ ಧನ್ಯವಾದಗಳು ಸಲ್ಲಿಸಿದರು.

ಈ ಮೊದಲು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಲಿ ಎಂದು ಇದ್ದ ಹೆಸರನ್ನು ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಕಲ್ಯಾಣ ಕರ್ನಾಟಕದ ಪ್ರದೇಶ ಅಭಿವೃದ್ಧಿ ಮಂಡಲಿ ಎಂದು ನಾಮಕರಣ ಮಾಡಿದ್ದು, ನಮ್ಮ ಸರ್ಕಾರ ಈ ಭಾಗದ ಅಭಿವೃದ್ಧಿಗೆ ಕಂಕಣ ಬದ್ದವಾಗಿದೆ ಎಂದು ಸಚಿವ ಲಕ್ಷ್ಮಣ ಸವದಿ ಅವರು ಹೇಳಿದರು.

ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಬಿಜೆಪಿ ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಜ್ ಸಿಂಗ್ ತಿವಾರಿ, ಮುಖಂಡರಾದ ದಂಡಪ್ಪ ಸಾಹು ಕುಳಗೇರಾ,ಬಸವರಾಜಗೌಡ ಕುಕನೂರ, ಶ್ರೀಶೈಲ ಕರ್ಕಿಹಳ್ಳಿ, ಯುವ ಮುಖಂಡರಾದ ರಾಕೇಶ್ ಹರಸೂರ, ಶರಣ ಸಜ್ಜನ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420