ಕ್ಷೇತ್ರದಲ್ಲಿ ಕರೋನಾ ಮೂರನೇ ಅಲೆಯನ್ನು ಎದುರಿಸಲು ಈಗಿನಿಂದಲೇ ತಯಾರಿ: ಶಾಸಕ ಸತೀಶ್‌ ರೆಡ್ಡಿ

ಬೆಂಗಳೂರು: ಕರೋನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ. ಮೂರನೇ ಅಲೆಯು ಹೆಚ್ಚಿನ ಹಾನಿಯನ್ನು ಮಾಡದೇ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೊಮ್ಮನಹಳ್ಳೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆಯ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಮೂರನೇ ಅಲೆಯನ್ನು ಎದುರಿಸಲು ಈಗನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೊಮ್ಮನಹಳ್ಳೀ ಶಾಸಕ ಸತೀಶ್‌ ರೆಡ್ಡಿ ತಿಳಿಸಿದರು.

ಇಂದು ಜೆಪಿನಗರದ ಪುಟ್ಟೇನಹಳ್ಳಿ ಪೋಲೀಸ್‌ ಠಾಣೆಯ ಬಳೀ ಇರುವ ಸತ್ಯಸಾಯಿಗಣಪತಿ ದೇವಸ್ಥಾನದ ಆಟದ ಮೈದಾನದ ಬಳಿ ಆರೋಗ್ಯದೀಪ ಸ್ವಾಸ್ಥ್ಯ ಸಮಿತಿ, ಸ್ವಾತಿ ಮಹಿಳಾ ಸಂಘ ಹಾಗೂ ಸ್ಥಳೀಯ ಮುಖಂಡರ ಸಹಯೋಗದೊಂದಿಗೆ 18-45 ವರ್ಷ ವಯಸ್ಸಿನವರಿಗೆ ಉಚಿತವಾಗಿ ಕೋವಿಡ್‌ ಲಸಿಕೆಯನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕರೋನಾ ಮಹಾಮಾರಿ ಎಲ್ಲರನ್ನೂ ಒಂದಿಲ್ಲ ಒಂದು ರೀತಿಯಲ್ಲಿ ತೊಂದರೆಗೀಡು ಮಾಡಿತು. ಈ ಮಹಾಮಾರಿಯ ಮೂರನೇ ಅಲೆಯನ್ನು ತಡೆಯಲು ಲಸಿಕಾ ಕಾರ್ಯಕ್ರಮ ಬಹಳ ಪ್ರಮುಖವಾದದ್ದು. ಈ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತಹ ಹಲವಾರು ಪ್ರದೇಶಗಳಲ್ಲಿ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದರ ಉಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಮೂರನೇ ಅಲೆ ಹೆಚ್ಚಿನ ಹಾನಿ ಮಾಡದೇ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಮುಂಜಾಗ್ರತೆಯಾಗಿ ಕ್ರೋಢೀಕರಿಸುವ ನಿಟ್ಟಿನಲ್ಲೂ ನಾವು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಮಹಾಪೌರರಾದ ರಾಮ್‌ ಮೋಹನ್‌ ರಾಜ್‌, ಮಾಜಿ ಕಾರ್ಪೋರೇಟರ್‌ ಶೋಭಾ ಮುನಿರಾಮ್‌, ಪ್ರಭಾವತಿ ರಮೇಶ್‌ ಹಾಗೂ ಸ್ಥಳೀಯ ಮುಖಂಡರುಗಳು ಚಾಲನೆ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420