ಕಲಬುರಗಿಯಲ್ಲಿ ಭಾರಿ ಮಳೆ ಸಂಭವ: ಸಹಾಯವಾಣಿ ಕೇಂದ್ರ ಸ್ಥಾಪನೆ

0
22

ಕಲಬುರಗಿ: ಜಿಲ್ಲೆಯಾದ್ಯಂತ ಇದೇ ಜುಲೈ 7 ರಿಂದ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದ್ದು, ಈ ಪ್ರವಾಹ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಸಾರ್ವಜನಿಕರು ಹಾಗೂ ಬಾದಿತ ವ್ಯಕ್ತಿಗಳು ಏನಾದರು ಸಮಸ್ಯೆ ಕಂಡುಬಂದಲ್ಲಿ ತುರ್ತಾಗಿ ಸಹಾಯವಾಣಿ ಕೇಂದ್ರಗಳ 7411896431, 7411896432 ಹಾಗೂ 7411896433 ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಅದೇ ರೀತಿ ನೀರಿನ ಒಳ ಹರಿವಿನ ರಭಸದಿಂದ ಭೀಮಾ ನದಿಯ ತೀರದ ಹಾಗೂ ಸನ್ನತಿ ಗ್ರಾಮದ ಬ್ರಿಡ್ಜ್-ಕಂ-ಬ್ಯಾರೇಜ್, ಬೆಣ್ಣೆತೋರಾ ಜಲಾಶಯ ಮತ್ತು ಕೆಳದಂಡೆ ಮುಲ್ಲಾಮಾರಿ ಜಲಾಶಯದ ಅಕ್ಕಪಕ್ಕದ ಗ್ರಾಮಗಳ ಜನರು ಹಾಗೂ ಜಾನುವಾರುಗಳ ಜೀವಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ನದಿ ದಂಡಗಳಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಮತ್ತು ಸಾರ್ವಜನಿಕರು ಹಳ್ಳ, ನಾಲೆ, ನದಿ ಕಡೆ ಹೋಗದಂತೆ ಹಾಗೂ ಜಾನುವಾರುಗಳನ್ನು ನದಿ ತೀರದಲ್ಲಿ ಬಿಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here