ನರೇಗಾ: ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

0
192

ಕಲಬುರಗಿ: ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಮೆ/ ಮನೀಷ ಮ್ಯಾನ್‍ಪವರ್ ಎಜೆನ್ಸಿಯಿಂದ ತಾಲೂಕು ಮಟ್ಟದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀμï ಶಶಿ ಅವರು ತಿಳಿಸಿದ್ದಾರೆ.

ತಾಲೂಕು ಎಮ್‍ಐಎಸ್ ಸಂಯೋಜಕರು 3 ಹುದ್ದೆಗಳಿಗೆ, ತಾಲೂಕು ಐಇಸಿ ಸಂಯೋಜಕರು 4 ಹುದ್ದೆಗಳಿಗೆ ಹಾಗೂ ತಾಂತ್ರಿಕ ಸಹಾಯಕರು 25 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕು ಎಮ್‍ಐಎಸ್ ಸಂಯೋಜಕರು ಹಾಗೂ ತಾಲೂಕು ಐಇಸಿ ಸಂಯೋಜಕರು ಹುದ್ದೆಗಳಿಗೆ ಗರಿಷ್ಠ ವಯೋಮಿತಿ 45 ವರ್ಷದೊಳಗಿರಬೇಕು.

Contact Your\'s Advertisement; 9902492681

ಅರ್ಹ ಅಭ್ಯರ್ಥಿಗಳು https://kalaburagi.nic.in ಆನ್‍ಲೈನ್ ಮೂಲಕ 2021ರ ಜುಲೈ 15 ರೊಳಗಾಗಿ ಅರ್ಜಿ ಸಲಿಸಬೇಕು. ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಮಾಸಿಕ ವೇತನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here