ಶ್ರೀಗಿರಿ ಮಠದ ಆವರಣದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

0
14

ಸುರಪುರ: ತಾಲೂಕಿನ ಲಕ್ಷ್ಮೀಪುರ ಶ್ರೀಗಿರಿ ಮಠದ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ 73ನೇ ಸಂಸ್ಥಾಪನ ದಿನದ ಅಂಗವಾಗಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸರಸ್ವತಿ ಮತ್ತು ಸ್ವಾಮಿವಿವೇಕಾನಂದರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಜೊತೆಗೆ ಶ್ರೀಮಠದ ಆವರಣದಲ್ಲಿ ಸಸಿಗಳನ್ನು ನೆಡುವ ಜೊತೆಗೆ ಮಠದ ಬಳಿಯ ಗುಡ್ಡದಲ್ಲಿ ವಿವಿಧ ಜಾತಿಯ ಮರಗಳ ಬೀಜಗಳನ್ನು ಚೆಲ್ಲುವ ಮೂಲಕ ವಿಶೇಷವಾಗಿ ವಿದ್ಯಾರ್ಥಿ ದಿವಸ್ ಆಚರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಠದ ಪೂಜ್ಯರಾದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,ವಿದ್ಯಾರ್ಥಿ ದಿನಾಚರಣೆ ಅಂಗವಾಗಿ ಮಠದ ಆವರಣದಲ್ಲಿ ಸಸಿಗಳನ್ನು ನೆಡುವುದರ ಜೊತೆಗೆ ಗುಡ್ಡದಲ್ಲಿ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಬೀಜಗಳನ್ನು ಚೆಲ್ಲುವ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು.

ನಂತರ ಎಬಿವಿಪಿ ಕಲಬುರಗಿ ವಿಭಾಗಿಯ ಸಹ ಪ್ರಮುಖ ಡಾ:ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಈ ಜುಲೈ 9ಕ್ಕೆ ನಮ್ಮ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನೆಯಾಗಿ 73 ವರ್ಷಗಳಾಗಿದೆ.ಎಬಿವಿಪಿಯ ಸಂಸ್ಥಾಪನ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸುವ ಮೂಲಕ ದೇಶದ ಎಲ್ಲಾ ವಿದ್ಯಾರ್ಥಿಗಳ ಏಕತೆಯನ್ನು ಮೆರೆಯುತ್ತಿದೆ.ಅಲ್ಲದೆ ವಿಶ್ವದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿ ಗುರುತಿಸಿಕೊಂಡಿದೆ.ದೇಶದಲ್ಲಿನ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಎದುರಾದಲ್ಲಿ ತಕ್ಷಣಕ್ಕೆ ಧ್ವನಿ ಎತ್ತುವ ಎಬಿವಿಪಿ ಸದಾಕಾಲ ವಿದ್ಯಾರ್ಥಿಗಳ ಶ್ರೇಯೋಭಿಧ್ಧಿಗೆ ಕೆಲಸ ಮಾಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.ಈ ಸಂದರ್ಭದಲ್ಲಿ ಪರಿಷತ್‍ನ ಜಿಲ್ಲಾ ಪ್ರಮುಖ ಅನೀಲ್ ಪಾಟೀಲ್,ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ, ರಾಮ್ ಸೇನಾ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದಿವಳಗುಡ್ಡ,ಹುಲಗಪ್ಪ,ಧರ್ಮರಾಜ,ನಾಗರಾಜ ಮಕಾಶಿ,ಅಯ್ಯಣ್ಣ ಸುಂಗಿ,ಶರಣು,ಹುಲಗಪ್ಪ ಮೇದಾ,ಧರ್ಮರಾಜ,ಗುರುನಾಥರಡ್ಡಿ ಶೀಲವಂತ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here