ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುದಾನದ: ಸಿಎಂ ಯಡಿಯೂರಪ್ಪ

0
67

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೋಸ್ಕರ ಕೆಕೆಆರ್ ಡಿ ಬಿ 1500 ಕೋಟಿ ರೂ. ಅನುದಾನವಲ್ಲದೇ ಈ ಭಾಗದ ಇನ್ನು ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವುದಕ್ಕೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಭರವಸೆ ನೀಡಿದರು.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ 83 ಕೋಟಿ ವೆಚ್ಚದ ಲೋಕೋಪಯೋಗಿ ಭವನದ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆಯನ್ನು ನೆರವೇರಿಸಿ ಮುಖ್ಯಮಂತ್ರಿ ಯವರು ಮಾತನಾಡಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಗೆ ತೃಪ್ತಿ ಪಡದೇ ಈ ಭಾಗದ ವಿಶೇಷ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತ ಅನುದಾನ ಒದಗಿಸಲಾಗುತ್ತಿದೆ, ಕೋವಿಡ್ ಸಂಕಷ್ಟದಲ್ಲೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುಂಠಿತಗೊಳ್ಳಬರದೆಂಬ ಆಶಯದಿಂದ 1500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಹಾಗೂ ಈ ಭಾಗದ ವಿಶೇಷ ಅಭಿವೃದ್ಧಿಗೆ ಡಾ. ನಂಜುಂಡಪ್ಪ ವರದಿ ಆಧರಿಸಿದಂತೆ ಕೃಷಿ, ಕೈಗಾರಿಕೆಗಳ ಪ್ರಗತಿ ಜೊತೆಗೆ ಜನರ ಅಭ್ಯುದಯಕ್ಕಾಗಿ ಯು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಈ ಭಾಗದ ವಿವಿಧ ಅಂಶಗಳ ಹಾಗೂ ಹೊಸ ಯೋಜನೆಗಳ ಅನುಷ್ಠಾನಕ್ಕೆ ಅಭಿವೃದ್ಧಿಗೆ ಪೂರಕ ಕಾಮಗಾರಿಗಳಿಗೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಲು ಸರ್ಕಾರ ಸಿದ್ದವಿದೆ, ಈ ಭಾಗದ ಬೆಳವಣಿಗೆ ನೀಡಬೇಕಾದರೆ ಲೋಕೋಪಯೋಗಿಯ ಈ ಬ್ರಹತ್ ಕಟ್ಟಡವೇ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ಮಾತನಾಡಿ, ಕೋವಿಡ್ ಸಂದರ್ಭದ ಸಂಕಷ್ಟದಲ್ಲೂ ಅಭಿವೃದ್ಧಿಗಳಿಗೆ ಹಣ ಬಿಡುಗಡೆ ಮಾಡುತ್ತಿರುವುದು ನೋಡಿದರೆ ನಿಜಕ್ಕೂ ಸಂತೋಷವೇಬಿಸುತ್ತದೆ ಎಂದ ಅವರು, ಸಿಎಂ ಯಡಿಯೂರಪ್ಪ ಅವರು 940 ಕೋಟಿ ರೂ. ಗಳ ಅನುದಾನ ರಾಜ್ಯಕ್ಕೆ ನೀಡಿರುವ ಕಾರ್ಯಕ್ಕೆ ಧನ್ಯವಾದಗಳು ಸಲ್ಲಿಸಿದರು.

ಬಿಜೆಪಿ ಸರ್ಕಾರದಲ್ಲಿ ನೇರವಾಗಿ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗುತ್ತಿರುವುದು ನಿಜವಾದ ಬದಲಾವಣೆಯ ಪಥವಾಗಿದೆ ಎಂದರು.

ಈ ವೇಳೆಯಲ್ಲಿ ವೇದಿಕೆಯ ಮೇಲೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ ಆರ್. ನಿರಾಣಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ,
ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಡಾ. ಸಾಯಿಬಣ್ಣ ತಳವಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಳಗೆ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಗುರುಬಸಪ್ಪ (ಅಪ್ಪು) ಕಣಕಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ, ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಮಾತನಾಡಿದರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸ್ವಾಗತಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here