ಬೆಂಗಳೂರು: ದೇಶದ ಸಂವಿಧಾನ ಶಿಲ್ಪಿ ಮತ್ತು ಮಹಾನ ರಾಷ್ಟ್ರವಾದಿ ನಾಯಕರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಅತಿ ಹೆಚ್ಚು ಅನುಷ್ಠಾನಕ್ಕೆ ತಂದ ಮತ್ತು ಅವರಿಗೆ ಅತ್ಯಂತ ಗೌರವ ನೀಡಿದ ಪಕ್ಷ ಬಿಜೆಪಿ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ವರ್ಚುವಲ್ ಆಗಿ ಸೇರಿ ಉದ್ಘಾಟಿಸಿ ಅವರು ಮಾತನಾಡಿದರು. ಎಸ್‍ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಲಾಲ್ ಸಿಂಗ್ ಆರ್ಯ ಅವರೂ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸಿದ್ದರು.
ಡಾ. ಅಂಬೇಡ್ಕರ್ ಅವರನ್ನು ಸೋಲಿಸಿದ ಮತ್ತು ಅವರಿಗೆ ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಅವರ ಹೆಸರು ಹೇಳಿ ಮತ ಕೇಳುವ ಯಾವ ನೈತಿಕ ಹಕ್ಕು ಉಳಿದಿಲ್ಲ. ಅವರ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಅವಕಾಶವನ್ನೂ ಕಾಂಗ್ರೆಸ್ ಪಕ್ಷ ನೀಡಲಿಲ್ಲ ಎಂದು ಅವರು ಟೀಕಿಸಿದರು.
ಡಾ.ಅಂಬೇಡ್ಕರ್ ಅವರು ಹುಟ್ಟಿದ ಮೌವ್ಹ ಪ್ರದೇಶವನ್ನು ಅಭಿವೃದ್ಧಿ ಪಡಿಸಿ ಅದನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸುವ ಕೆಲಸವನ್ನು ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಮಾಡಿದೆ. ದೀಕ್ಷಾ ಭೂಮಿ,ಚೈತ್ಯಭೂಮಿ, ಕರ್ಮಭೂಮಿ ಸೇರಿದಂತೆ ಡಾ.ಬಿ ಆರ್ ಅಂಬೇಡ್ಕರ ರವರಿಗೆ ಸಂಭಂಧಿಸಿದ ಮಹತ್ವದ *ಪಂಚ ತೀರ್ಥ* ಕ್ಷೇತ್ರಗಳ ಅಭಿವೃದ್ಧಿ ಪಡಿಸುವ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.
ಬಿಜೆಪಿ ದಲಿತ ವಿರೋಧಿ ಎಂಬ ಕಾಂಗ್ರೆಸ ಪಕ್ಷದ ಅಪಪ್ರಚಾರವನ್ನು ಬಿಜೆಪಿ ಸರ್ಕಾರದ ದಲಿತಪರ ಯೋಜನೆಗಳನ್ನು ಪ್ರಚಾರ ಮಾಡುವ ಮೂಲಕ ಎದುರಿಸಬೇಕು ಎಂದು ಅವರು ಕರೆ ನೀಡಿದರು. *ಡಾ. ಅಂಬೇಡ್ಕರ್ ಅವರು ಕಾಂಗ್ರೆಸ್ಸನ್ನು ಉರಿಯುವ ಮನೆ* ಎಂದು ಕರೆದಿದ್ದರು. ಇದನ್ನು ದಲಿತ ಜನಾಂಗಕ್ಕೆ ತಿಳಿಸುವ ಕಾರ್ಯಕ್ರಮ ರೂಪಿಸಲು ಎಸ್ ಸಿ ಮೋರ್ಚಾದ ರಾಜ್ಯ ಪದಾಧಿಕಾರಿಗಳಿಗೆ ತಿಳಿಸಿದರು.
100ಕ್ಕೂ ಹೆಚ್ಚು ದಲಿತರಿರುವ ಬೂತ್‍ನಲ್ಲಿ ದಲಿತ ಮೋರ್ಚಾದ ಸಂಘಟನೆಯನ್ನು ಬಲಪಡಿಸಬೇಕು. ಎಸ್ ಸಿ ವಿದ್ಯಾರ್ಥಿ ನಿಲಯಗಳಲ್ಲಿ ಉಸ್ತುವಾರಿಗಳನ್ನು ನೇಮಿಸಿ ವಾಸ್ತವಿಕ ಸಂಗತಿಗಳನ್ನು ತಿಳಿಸಬೇಕು. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ದಲಿತ ಸಮುದಾಯದ ಮೇಲೆ ಪ್ರಭಾವ ಬೀರಬಹುದಾದ ನಾಯಕರನ್ನು ಗುರುತಿಸಿ ಅವರಿಗೆ ಪಕ್ಷದ ಕಾರ್ಯವನ್ನು ತಿಳಿಸಬೇಕು. ಇದರಿಂದ ನಮ್ಮ ಪಕ್ಷವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಬಲಪಡಿಸಲು ಸಾಧ್ಯವಾಗಲಿದೆ ಎಂದರು.
ದಲಿತರ ಹಿತಾಸಕ್ತಿ ಕಾಪಾಡುವುದು ಮತ್ತು ಆತ್ಮಗೌರವ ಬೆಳೆಸಿ ಆತ್ಮನಿರ್ಭರತೆ ಕಡೆ ಸಾಗುವ ಪ್ರಯತ್ನ ನಡೆಸಬೇಕು. ಮೋರ್ಚಾದ ಪದಾಧಿಕಾರಿಗಳು ಜನಪರ ಕಾರ್ಯ ಮತ್ತು ಜನಪರ ಹೋರಾಟದ ಮೂಲಕ ಜನನಾಯಕರಾಗಿ ಬೆಳೆಯಬೇಕೆಂದು ಆಶಿಸಿದರು.
ಕಾಂಗ್ರೆಸ್‍ನವರು ಬಡವರ ಬಡತನ ದೂರ ಮಾಡಲು ಯಾವುದೇ ಯೋಜನೆ ರೂಪಿಸಲಿಲ್ಲ. ಆದರೆ, ನರೇಂದ್ರ ಮೋದಿ ಅವರು ಜನ್‍ಧನ್ ಖಾತೆಗಳ ಮೂಲಕ ಬಡವರನ್ನು ಬ್ಯಾಂಕಿಂಗ್ ಜೊತೆ ಜೋಡಿಸಿದರು. ಅವರ ಖಾತೆಗೆ ಹಣ ಹಾಕಿ ಅವರ ಬದುಕಿನ ಆಲೋಚನೆಗಳನ್ನು ಬದಲಿಸಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ, ದೀನದಯಾಳ್ ವಿದ್ಯುತ್ತೀಕರಣ ಯೋಜನೆ, ಸೌಭಾಗ್ಯ ಯೋಜನೆ, ಉಜ್ವಲಾ ಗ್ಯಾಸ್ ಯೋಜನೆ- ಇವೆಲ್ಲವೂ ಬಡಜನರಿಗಾಗಿ ರೂಪಿತವಾದ ಯೋಜನೆಗಳು ಎಂದು ವಿವರಿಸಿದರು.
ಪಕ್ಷದ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ವಕ್ತಾರರೂ ಆದ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಪ್ರಧಾನಿಗಳಾದ ನರೇಂದ್ರ ಮೋದಿಯವರ ಕೇಂದ್ರ ಸರಕಾರವು ದಲಿತರಿಗೆ ಸಂಪುಟದಲ್ಲಿ 20 ಸ್ಥಾನ ಹಾಗೂ 3 ರಾಜ್ಯಪಾಲ ಹುದ್ದೆ ನೀಡುವುದರ ಮೂಲಕ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದೆ. ನಾನು ರಾಜ್ಯ ಅಧ್ಯಕ್ಷರಾದ ಮೇಲೆ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ದಲಿತರು ಬಿಜೆಪಿ ಕಡೆ ವಾಲಿಸಲು ಪ್ರಯತ್ನಿಸುತ್ತಿದ್ದೆನೆ ದಲಿತ ಸಮುದಾಯ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿಸುವ ದೃಢವಿಶ್ವಾಸವಿದೆ ಎಂದರು.
ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿ ಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಇನ್ನೋರ್ವ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ನಂಜುಂಡ ಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಬಾಬು, ಜಗದೀಶ್,ರಾಜ್ಯ ಕಾರ್ಯದರ್ಶಿ ನಾಮದೇವ ರಾಠೋಡ, ವೆಂಕಟೇಶ, ವೆಂಕಟೇಶ ದೊಡ್ಡೇರಿ, ಸೇರಿದಂತೆ ಪದಾಧಿಕಾರಿಗಳು, ಆಹ್ವಾನಿತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…