ನಗರಸಭೆಯಿಂದ ಫಾಗಿಂಗ್ ಕಾರ್ಯ

ಶಹಾಬಾದ: ನಗರದಲ್ಲಿ ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಿಸಲು ನಗರಸಭೆಯಿಂದ ಫಾಗಿಂಗ್ ಸಿಂಪರಣೆ ಕಾರ್ಯ ಭರದಿಂದ ಸಾಗಿದೆ. ಫಾಗಿಂಗ್ ಯಂತ್ರ ಬಳಸಿ ನಗರಸಭೆಯ ಸಿಬ್ಬಂದಿಗಳು ವಾರ್ಡ ನಂ. ೧೪ ಹಾಗೂ ೧೫ರ ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಹೊರಗೆ ಫಾಗಿಂಗ್ ಕಾರ್ಯ ನಡೆಸಿದರು.

ಈಗಾಗಲೇ ವಾರ್ಡ ನಂ. ೧೪ರಲ್ಲಿ ಡೆಂಗ್ಯೂ ರೋಗ ಬಾಲಕರಲ್ಲಿ ಕಾಣಿಸಿಕೊಂಡಿದ್ದು , ಆ ಪ್ರದೇಶದಲ್ಲಿ ಫಾಗಿಂಗ್ ಮಾಡಲಾಗುತ್ತಿದೆ. ಸೊಳ್ಳೆಗಳು ಹೆಚ್ಚು ಬಾದಿಸುತ್ತಿರುವ ಪಟ್ಟಣದ ವಾರ್ಡಗಳಿಗೆ ಫಾಗಿಂಗ್ ಮಾಡುವ ಕಾರ್ಯ ನಿರಂತರ ನಡೆಯುತ್ತಿದೆ.ಇದಾದ ನಂತರ ನಗರಸಭೆಯ ಎಲ್ಲಾ ವಾರ್ಡಗಳಲ್ಲಿಯೂ ಫಾಗಿಂಗ್ ಕಾರ್ಯ ನಡೆಯಲಿದೆ ಎಂದು ನಗರಸಭೆಯ ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ತಿಳಿಸಿದರು.

ಈಗಾಗಲೇ ನಗರಸಭೆಯ ಆರೋಗ್ಯ ನಿರೀಕ್ಷಕರು ಹಾಗೂ ನಗರಸಭೆಯ ಸದಸ್ಯರು ಸೇರಿಕೊಂಡು ಡೆಂಗ್ಯೂ ಪೀಡಿತರ ಮನೆಮನೆಗೆ ಬೇಟಿ ನೀಡಿ ವಿಚಾರಿಸಿದ್ದಾರೆ.ಅಲ್ಲದೇ ಮನೆಯ ಮುಂದಿನ ಚರಂಡಿ ತುಂಬಿಕೊಂಡಿದೆ.ಸೊಳ್ಳೆಗಳ ಹಾವಳಿ ವಿಪರೀತವಾಗಿದೆ ಎಂದು ಸಾರ್ವಜನಿಕರು ದೂರು ಸಲ್ಲಿಸಿದ್ದಾರೆ.ಅದಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಎಲ್ಲಾ ಕ್ರಮಕೈಗೊಂಡಿದಲ್ಲದೇ ಚರಂಡಿ ಸುತ್ತಮುತ್ತ ಹಾಗೂ ಸೊಳ್ಳೆಗಳ ಹಾವಳಿ ಹೆಚ್ಚಾಗಿರುವ ಸ್ಥಳದಲ್ಲಿ ಬ್ಲಿಚಿಂಗ್ ಪೌಡರ್ ಕೂಡ ಸಿಪಂರಣೆ ಮಾಡಲಾಗಿದೆ.

ಅಲ್ಲದೇ ಮನೆಯ ಸುತ್ತಮುತ್ತ ಒಡೆದ ಬಾಟಲ್, ಹಳೆ ಟೈರ್, ಡ್ರಮ್‌ಗಳಲ್ಲಿ ಶೇಖರಣೆಗೊಂಡ ನೀರನ್ನು ಆದಷ್ಟು ವಾರದೊಳಗೆ ಇಲ್ಲದಂತೆ ಮಾಡಬೇಕು. ಒಂದು ವೇಳೆ ಒಂದು ವಾರ ನೀರು ಇದ್ದರೇ ಅದರಲ್ಲಿ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುತ್ತದೆ.ಆದಷ್ಟು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಳೆಗಾಲ ಇರುವುದರಿಂದ ಹೆಚ್ಚಾಗಿ ಬಿಸಿ ನೀರು ಕುಡಿಯುವುದನ್ನು ರೂಡಿಸಿಕೊಳ್ಳಬೇಕೆಂದು ಜಾಗೃತಿ ಮೂಡಿಸಿದರು.

ಮೋಡ ಕವಿದ ವಾತಾವರಣ, ಮಳೆ ಮತ್ತು ಚರಂಡಿಯಲ್ಲಿ ಕೊಳಚೆ ಶೇಖರಣೆಯಿಂದ ಸಾಂಕ್ರಾಮಿಕ ರೋಗಗಳ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.ನಗರದ ಕೆಲ ಬಡಾವಣೆಯಲ್ಲಿ ಡೆಂಗ್ಯೂ ಪತ್ತೆಯಾದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಫಾಗಿಂಗ್, ಚರಂಡಿ ಸ್ವಚ್ಛತೆ ಹಾಗೂ ಬ್ಲಿಚಿಂಗ್ ಪೌಡರ್ ಬಳಕೆ ಮಾಡುವುದರ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲಾ ಕ್ರಮ ಕೈಗೊಂಡಿದ್ದೆವೆ- ಡಾ.ಕೆ.ಗುರಲಿಂಗಪ್ಪ ಪೌರಾಯುಕ್ತ ನಗರಸಭೆಯ ಶಹಾಬಾದ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

2 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420