ಕಲಬುರಗಿ: ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು, ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ, ಬೊಧಕೇತರ ಸಿಬ್ಬಂದಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಆಯಾ ಪದವಿ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ದಿನಾಂಕ ನಿಗದಿಪಡಿಸಿದ ದಿನದಂದು ಲಸಿಕೆ ನೀಡಲಾಗುತ್ತಿದೆ. ಪ್ರಾಂಶುಪಾಲರು ತಮ್ಮ ಕಾಲೇಜಿನಲ್ಲಿ ಈಗಾಗಲೇ ಲಸಿಕೆ ಪಡೆದ ವಿದ್ಯಾರ್ಥಿಗಳ ವಿವರವನ್ನು ಆಯಾ ತಾಲೂಕುಗಳ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.
ತಮ್ಮ ಕಾಲೇಜಿನಲ್ಲಿ ಲಸಿಕೆ ಪಡೆಯದೆ ಇರುವ ವಿದ್ಯಾರ್ಥಿಗಳು, ಬೋಧಕ, ಬೊಧಕೇತರ ಹಾಗೂ ಸಿಬ್ಬಂದಿಗಳು ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.