ಶಹಾಪುರ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ದೌರ್ಜನ್ಯಕ್ಕೆ ಒಳಗಾದಾಗ ಅವರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ,ಅವುಗಳನ್ನು ದುರುಪಯೋಗ ಮಾಡಿಕೊಳ್ಳದೆ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಸುರಪುರದ ಶ್ರೀ ಮೈಲಾರಲಿಂಗೇಶ್ವರ ಎಂ.ಎಸ್.ಡಬ್ಲ್ಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಮಲ್ಲಿಕಾರ್ಜುನ್ ಹೇಳಿದರು.
ತಾಲ್ಲೂಕಿನ ಸಗರ ಗ್ರಾಮದ ವಾಲ್ಮೀಕಿ ಭವನದಲ್ಲಿ ಕಲಬುರಗಿ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಅಧಿನಿಯಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಮ್ಮ ದೇಶದ ಗ್ರಾಮಾಂತರ ಭಾಗದಲ್ಲಿ ಪ್ರತಿ ದಿನ ನಿರಂತರವಾಗಿ ನಮ್ಮ ಜನಗಳ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ ಸಾಮಾಜಿಕ ಬಹಿಷ್ಕಾರ,ಕ್ಷೌರ ನಿರಾಕರಣೆ,ದೇವಸ್ಥಾನ ಪ್ರವೇಶ ನಿಷೇಧ,ಇಂಥ ಮುಂತಾದ ಘಟನೆಗಳು ನಡೆಯುತ್ತಲೇ ಇವೆ ಇಂಥವುಗಳನು ತೊಡೆದು ಹಾಕುವ ಸದುದ್ದೇಶದಿಂದ ಕಲಬುರಗಿ ರಂಗಾಯಣ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಬಣ್ಣಿಸಿದರು.
ಯಾವುದೇ ಗ್ರಾಮದಲ್ಲಿ ದೌರ್ಜನ್ಯ ಘಟನೆಗಳು ನಡೆದಾಗ ತಕ್ಷಣವೇ ಶಾಂತಿ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು,ಅದು ಮಿತಿ ಮೀರಿದಾಗ ಕಾನೂನಿನ ಮೊರೆ ಹೋಗಿ ತಜ್ಞರ ಮಾಹಿತಿ ಮೇರೆಗೆ ಅವಕಾಶ ಸದುಪಯೋಗಪಡಿಸಿಕೊಳ್ಳಿ ಎಂದು ಯುವ ಮುಖಂಡರಾದ ಸಂತೋಷ ಗೌಡ ಸುಬೇದಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಈ ಸಮಾರಂಭದ ವೇದಿಕೆಯ ಮೇಲೆ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸೋಪಣ್ಣ ನಾಯಕ್,ಯುವ ಮುಖಂಡ ಭೀಮಣ್ಣ ಮಕಾಶಿ,ಚಾಲಕರ ಸಂಘದ ಅಧ್ಯಕ್ಷರಾದ ಪರಶುರಾಮ ಅಂಬ್ಲಪ್ಪಸ್ವಾಮಿ,ಯಲ್ಲಪ್ಪ ಗಡ್ಡೆ, ಶಿವರಾಯ್ ಭಾಗಣ್ಣ ಸುರಪುರ,ಶಿವಪ್ಪ ನಾಯಕ,ವಿಜಯ ಕುಮಾರ,ರಾಮು ಹಾಗೂ ಸಮಾಜದ ಎಲ್ಲ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…