ಬೆಂಗಳೂರು: ಐ.ಬಿ.ಪಿ.ಎಸ್. ಸಂಸ್ಥೆಯು ಪ್ರಸ್ತುತ ನಡೆಸುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಿ ಕನ್ನಡಿಗರಿಗೆ ನ್ಯಾಯ ಸಿಗುವಂತೆ ಕ್ರಮವಹಿಸುವ ತುರ್ತು ಅಗತ್ಯವಿದ್ದು, ಐ.ಬಿ.ಪಿ.ಎಸ್. ನೇಮಕಾತಿಗಳಲ್ಲೂ ಕೂಡ ಪ್ರಾದೇಶಿಕ ಭಾಷೆಗಳನ್ನು ಬಳಸುವ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.
ಪ್ರಸ್ತುತ ಕರ್ನಾಟಕದ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3000ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಡೆಸಿರುವುದರಿಂದ ಕನ್ನಡಿಗರಿಗೆ ಸಿಗಬೇಕಾದ ಹುದ್ದೆಗಳು ಕೈತಪ್ಪಿರುವುದನ್ನು ಪ್ರಾಧಿಕಾರ ಖಂಡಿಸುವುದಾಗಿ ಹೇಳಿದ್ದಾರೆ.
ಕೇಂದ್ರದ ವಿತ್ತ ಸಚಿವರು, ಈ ಹಿಂದೆ ನಡೆದ ಅಧಿವೇಶನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಯತ್ನದ ಫಲವಾಗಿ ಆಯಾ ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿಗಳನ್ನು ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ ಅದು ಹುಸಿಯಾಗಿದೆ. ಅದರಂತೆ ಎಸ್.ಬಿ.ಐ ನೇಮಕಾತಿಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ನೀಡಲಾಗಿದೆ. ಆದರೆ ಐ.ಬಿ.ಪಿ.ಎಸ್. ನೇಮಕಾತಿಗಳಲ್ಲಿ ಮಾತ್ರ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೊಂದು ಜ್ವಲಂತ ಸಮಸ್ಯೆಯಾಗಿದ್ದು, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕೆಂದು ಹಲವು ರಾಜ್ಯಗಳಲ್ಲಿ ಹೋರಾಟ ನಡೆಸುತ್ತಿವೆ. ವಿಶ್ವದ ಹಲವು ರಾಷ್ಟ್ರಗಳು ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲು ನೀತಿಯನ್ನು ಸಹ ರೂಪಿಸಿವೆ. ರಾಜ್ಯ, ಕೇಂದ್ರ ಸಕಾರದ್ದಿರಲಿ, ಖಾಸಗಿ ವಲಯವಿರಲಿ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಅಂದರೆ ಆಯಾ ರಾಜ್ಯದವರಿಗೇ ಮೀಸಲಿರುವಂತೆ ಇಡೀ ರಾಷ್ಟ್ರಕ್ಕೆ ಅನ್ವಯವಾಗುವ ‘ಸ್ಥಳೀಯರಿಗೆ ಉದ್ಯೋಗ ರಾಷ್ಟ್ರೀಯ ನೀತಿ’ಯನ್ನು ರೂಪಿಸಿ ಅದನ್ನು ಸಂಸತ್ನಿಲ್ಲಿ ಮಂಡಿಸಿ ಕಾನೂನು ರೂಪಿಸುವಂತೆ ಕ್ರಮವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಸಿಬ್ಬಂದಿ ಆಯ್ಕೆ ಆಯೋಗದ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿದೆ. ಆದರೆ, ನೇಮಕಾತಿ ಪರೀಕ್ಷೆಗಳು ಹಿಂದಿ, ಇಂಗ್ಲಿಷ್ಗೆಳಲ್ಲಿ ಮಾತ್ರ ನಡೆಯುತ್ತಿವೆ. ಇದರಿಂದ ಸ್ಥಳೀಯರಿಗೆ (ಕನ್ನಡಿಗರಿಗೆ) ಯಾವುದೇ ಉಪಯೋಗವಾಗಿಲ್ಲ. ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುತ್ತಿಲ್ಲ. ರೈಲ್ವೆ ನೇಮಕಾತಿ ಸಮಿತಿಯು ಕೆಳಹಂತದ ಹುದ್ದೆಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಬರೆಯಲು ಅವಕಾಶಕಲ್ಪಿಸಿದೆ. ಅದೇ ಮಾದರಿಯನ್ನು ಐ.ಬಿ.ಪಿ.ಎಸ್. ಹಾಗೂ ಇತರೆ ಸಿಬ್ಬಂದಿ ಆಯ್ಕೆ ಆಯೋಗಗಳು ಸಹ ಅನುಸರಿಸಬೇಕು ಮತ್ತು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯಲ್ಲಿರುವ ರಾಜ್ಯದವರು ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಇರುವಂತೆ ನಿಯಮ ರಚನೆಯಾಗಬೇಕು ಎಂದಿದ್ದಾರೆ.
ಐ.ಬಿ.ಪಿ.ಎಸ್ ಪ್ರಸ್ತುತ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ಗೆಳಲ್ಲಿ ಮಾತ್ರ ನಡೆಸುತ್ತಿದೆ. ಅಭ್ಯಥಿಯ ಆಯ್ಕೆ ಮಾಡಿಕೊಳ್ಳುವ ಪ್ರಾದೇಶಿಕ ಭಾಷಾ ಜ್ಞಾನವು ಅಪೇಕ್ಷಣೀಯ ಅಂದಿರುವುದರಿಂದ ಹಿಂದಿ ಮತ್ತು ಇಂಗ್ಲಿಷ್ ಜ್ಞಾನ ಇಲ್ಲದವರಿಗೆ ನೇಮಕಾತಿಯಲ್ಲಿ ಅವಕಾಶ ಸಿಗುತ್ತಿಲ್ಲ. ಅದನ್ನು ಸರಿಪಡಿಸಲು 2012ರವರೆಗೆ ಇದ್ದ ‘ಅಭ್ಯಥಿಯು ಆಯ್ಕೆ ಮಾಡಿಕೊಳ್ಳುವ ರಾಜ್ಯದ ಅಧಿಕೃತ ಭಾಷೆಯಲ್ಲಿ ಪರಿಣಿತರಾಗಿರಬೇಕು, ಅಂದರೆ ಮೆಟ್ರಿಕ್ಯುಲೇಷನ್/ ಎಸ್ಸೆಸ್ಸೆಲ್ಸಿ/ ಹತ್ತನೇ ತರಗತಿಗಳ ಹಂತದಲ್ಲಿ ಒಂದು ಭಾಷೆಯಾಗಿ ಕಡ್ಡಾಯವಾಗಿ ಓದಿರಲೇಬೇಕು’ ಎಂಬ ನಿಯಮವನ್ನು ಜಾರಿಗೆ ತರಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರು ಆಗ್ರಹಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…