ಬಿಸಿ ಬಿಸಿ ಸುದ್ದಿ

ಸರ್ಕಾರದ ಮಾರ್ಗಸೂಚಿ ಮರೆತ ಜನ: ಸರಿಪಡಿಸುವ ಗೋಜಿಗೆ ಹೋಗದ ಅಧಿಕಾರಿಗಳು

ಶಹಾಬಾದ: ನಗರದ ಪಾರ್ವತಿ ಸಭಾಂಗಣದಲ್ಲಿ ಆಯೋಜಿಸಲಾದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಕಲಬುರಗಿ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮದ ಹೊರಗಡೆ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಿಕ ಅಂತರ ಕಾಪಾಡದಿರುವುದು ಕಂಡು ಬಂದಿದ್ದರೂ ಮಾರ್ಗಸೂಚಿ ಪಾಲನೆ ಬಗ್ಗೆ ಹೇಳಬೇಕಾದ ಅಧಿಕಾರಿಗಳು ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸಿರುವುದಕ್ಕೆ ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಪೂಜಪ್ಪ ಮೇತ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಟ್‌ಗಳು ವಿತರಿಸಲಾಗುತ್ತದೆ ಎಂದು ತಿಳಿದ ಕೂಡಲೇ ಕಾರ್ಮಿಕರು ಸಭಾಂಗಣದ ಆವರಣದಲ್ಲಿ ಹಾಗೂ ಹೊರಗಡೆ ಸಾವಿರಾರು ಜನರು ಸಾಮಾಜಿಕ ಅಂತರ ಮರೆತು ನುಗ್ಗುತ್ತಿರುವುದು ಕಂಡು ಬಂದಿತು.ಕೆಲವು ಜನರು ಮಾತ್ರ ಮಾಸ್ಕ್ ಧರಿಸಿದ್ದು ಬಿಟ್ಟರೆ ಬಹುತೇಖ ಜನರು ಯಾವುದೇ ಮಾರ್ಗಸೂಚಿ ಪಾಲನೆ ಮಾಡಲಿಲ್ಲ.

ಸರ್ಕಾರದ ಮಾರ್ಗಸೂಚಿಗಳಾದ ಮಾಸ್ಕ್, ಸಾಮಾಜಿಕ ಅಂತರ ಎನ್ನುವುದು ಎಳ್ಳಷ್ಟು ಕಾಳು ಇರಲಿಲ್ಲ. ಸರ್ಕಾರದ ಮಾರ್ಗಸೂಚಿ ಹೇಳಬೇಕಾದ ತಹಸೀಲ್ದಾರ, ಕಾರ್ಮಿಕ ಇಲಾಖೆ ಆಯುಕ್ತರು, ಪೊಲೀಸ್ ಆರಕ್ಷಕ ನಿರೀಕ್ಷಕರು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರು ಪದೇ ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಆಹಾರ ಕಿಟ್‌ಗಳನ್ನು ಪಡೆದುಕೊಳ್ಳಿ ಎಂದು ಹೇಳಿದನ್ನು ಬಿಟ್ಟರೇ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕೈಗೊಳ್ಳಲಿಲ್ಲ. ಹೋರಾಟಗಾರರು, ಪ್ರತಿಭಟನಾಕಾರರು ಹೋರಾಟ ಮಾಡಬೇಕಾದರೆ, ಮನವಿ ಪತ್ರ ಸಲ್ಲಿಸಬೇಕಾದರೆ ಐದು ಜನರೇ ಇರಬೇಕು.

ಮದುವೆ ಸಮಾರಂಭ ಮಾಡಬೇಕಾದರೆ ೪೦ ಜನ ಇರಬೇಕೆಂದು ನಿಯಮಗಳನ್ನು ಹೇಳುತ್ತಾರೆ. ಆದರೆ ಮಂಗಳವಾರ ನಗರದ ಪಾರ್ವತಿ ಸಭಾಂಗಣದ ಹೊರಗಡೆ ಸರ್ಕಾರ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಗೊತ್ತಿದ್ದರೂ ಅಧಿಕಾರಿ ವರ್ಗದವರು ಸರಿಪಡಿಸುವ ಗೋಜಿಗೆ ಹೋಗದೇ, ಶಾಸಕರು ಅಲ್ಲಿಂದ ಹೊರಡಿದ್ದೆ ತಡ ಅವರು ಅಲ್ಲಿಂದ ಹೊರಟು ಹೋಗಿದ್ದು ಮಾತ್ರ ದುರದೃಷ್ಟಕರ್ ಎಂದು ಮೇತ್ರೆ ಅಸಮಾಧನ ವ್ಯಕ್ತಪಡಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago