ಆಳಂದ: ತಾಲೂಕಿನ ಆಯ್ದ ಗ್ರಾಮದ ಕೆಲವೊಂದು ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಯೋಜನೆಯನ್ನು ಪರಿಚಯಿಸಿ ಗ್ರಾಮೀಣ ಭಾಗದ ಮಕ್ಕಳಿಗೆ ಡಿಜಿಟಲ್ ಆಧಾರಿತ ಶಿಕ್ಷಣ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಇತ್ತೀಚಿಗೆ ತಾಲೂಕಿನ ಗೋಳಾ ಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ನೂತನ ಎರಡು ಶಾಲಾ ತರಗತಿ ಕೋಣೆಗಳನ್ನು ಉದ್ಘಾಟಿಸಿ ಮಾತನಾಡಿದರು.
ನಗರ ಮತ್ತು ಗ್ರಾಮೀಣ ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಹೋಗಲಾಡಿಸಲು ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ. ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಇದಕ್ಕಾಗಿ ಹೆಚ್ಚಿನ ಅನುದಾನವೂ ಮೀಸಲಿಟ್ಟಿದ್ದೇನೆ ಎಂದು ನುಡಿದರು.
ಈ ಸಂದರ್ಭದಲ್ಲಿ ತಾ.ಪಂ ಇಒ ನಾಗಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ, ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಕೆಎಂಎಫ್ ನಿರ್ದೇಶಕ ಚಂದ್ರಕಾಂತ ಭೂಸನೂರ, ಜೆಇ ಲಿಂಗರಾಜ, ಮುಖಂಡರಾದ ಗೋಪಾಲ ಪವಾರ, ರವಿ ಪಾಟೀಲ, ಶರಣು ಕುಮಸಿ, ವೈಜನಾಥ ತೆಲ್ಲೂರ, ಶಂಕರ ಚವ್ಹಾಣ ಸೇರಿದಂತೆ ಇತರರು ಇದ್ದರು.