ಬಿಸಿ ಬಿಸಿ ಸುದ್ದಿ

ಚಿತ್ತಾಪೂರ: ನ್ಯಾಯಬೆಲೆ ಅಂಗಡಿಯ ಹೊಸ ಡೀಲರ್‍ಶಿಪ್‍ಗಾಗಿ ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ಕೊಡದೂರು ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಸಂಖ್ಯೆ 97ಕ್ಕೆ ಹೊಸ ಡೀಲರ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗಳ ಉಪನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡದೂರು ಗ್ರಾಮದಲ್ಲಿದ್ದ ನ್ಯಾಯಬೆಲೆ ಅಂಗಡಿ ಸಂಖ್ಯೆ 97ರ ವರ್ತಕರಾದ ವೀರಣ್ಣಗೌಡ ತಂದೆ ಸಿದ್ರಾಮಪ್ಪ ಪಾಟೀಲ್ ಅವರು ಅನಾರೋಗ್ಯದ ಕಾರಣ ತಮ್ಮ ಡೀಲರ್‍ಶಿಪ್‍ಗೆ ರಾಜೀನಾಮೆ ನೀಡಿದ್ದಾರೆ. ಚಿತ್ತಾಪುರ ತಹಸೀಲ್ದಾರರ ವರದಿಗಳನ್ನು ಆಧಾರಿಸಿ ಕಾರ್ಯಾಲಯದ ಅಧಿಕೃತ ಆದೇಶದನ್ವಯ ರಾಜೀನಾಮೆ ಅಂಗೀಕರಿಸಿ ಸದರಿಯವರು ಹೊಂದಿದ ನ್ಯಾಯಬೆಲೆ ಅಂಗಡಿ ಸಂಖ್ಯೆ 97 ರ ಪ್ರಾಧಿಕಾರ ಸಂಖ್ಯೆ: 647/95 ಯನ್ನು ರದ್ದುಪಡಿಸಿ ಆದೇಶಿಸಲಾಗಿರುತ್ತದೆ. ಅದರಂತೆ ತಹಸೀಲ್ದಾರÀರು ಸದರಿ ನ್ಯಾಯಬೆಲೆ ಅಂಗಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆಯ ಪರ್ಯಾಯ ವ್ಯವಸ್ಥೆಯನ್ನು ಮಾಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಚಿತ್ತಾಪುರ ತಹಸೀಲ್ದಾರರ ಶಿಫಾರಸ್ಸಿನನ್ವಯ ಚಿತ್ತಾಪೂರ ತಾಲ್ಲೂಕಿನ ಕೊಡದೂರು ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ರದ್ದಾದ ನ್ಯಾಯಬೆಲೆ ಅಂಗಡಿ ಸಂಖ್ಯೆ: 97 ರ ಹೊಸ ಡೀಲರ್ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ 54 ಎಎವೈ 424 ಪಿಹೆಚ್‍ಹೆಚ್ ಹಾಗೂ 54 ಎನ್‍ಪಿಹೆಚ್‍ಹೆಚ್ ಸೇರಿ ಒಟ್ಟು 532 ಪಡಿತರ ಚೀಟಿಗಳಿರುತ್ತವೆ. ನ್ಯಾಯಬೆಲೆ ಅಂಗಡಿ ಡೀಲರ್‍ಶಿಪ್ ನೇಮಕಾತಿಗಾಗಿ ದಿನಾಂಕ: 15-7-2021 ರಿಂದ ದಿನಾಂಕ: 14-8-2021 ಸಾಯಂಕಾಲ 5.30 ಗಂಟೆ ಒಳಗಾಗಿ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕೊಠಡಿ ಸಂಖ್ಯೆ 01. ಮಿನಿ ವಿಧಾನಸೌಧ, ಕಲಬುರಗಿ-585102 ಇಲ್ಲಿ ನಿಗದಿತ ನಮೂನೆ-ಎ ರಲ್ಲಿ ಎಲ್ಲಾ ನಿಗದಿಪಡಿಸಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು, ಷರತ್ತು, ನಿಯಮ, ಅರ್ಹತೆ ಮುಂತಾದ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಲಬುರಗಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago