ಸುರಪುರ: ಆಧುನಿಕ ತಂತ್ರಜ್ಞಾನವುಳ್ಳ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಅದ್ಭುತವಾದ ಕೆಲಸ ಮಾಡಲಾಗಿದೆ.ಇದರಿಂದ ಕ್ರೈಮ್ ರೇಟ್ ಕಡಿಮೆಯಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿದರು.
ನಗರದ ವಿವಿಧ ವೃತ್ತಗಳಲ್ಲಿ ನೂತನವಾಗಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಸಿಸಿ ಕ್ಯಾಮೆರಾಗಳು ಇಂದು ತುಂಬಾ ಅವಶ್ಯಕವಾಗಿವೆ,ಇದರಿಂದ ಎಸ್ಪಿಯವರು ಕೂಡ ಯಾಪ್ ಮೂಲಕ ಇಲ್ಲಿಯ ಎಲ್ಲಾ ಸಂಚಾರಿ ಆಗುಹೋಗುಗಳ ಗಮನಿಸಬಹುದಾಗಿದೆ.ಇನ್ನೂ ಹೆಚ್ಚಿನ ಕ್ಯಾಮೆರಾಗಳು ಬೇಕಾದಲ್ಲಿ ತಿಳಿಸಿದರೆ ಒದಗಿಸಿಕೊಡಲಾಗುವುದು.ಅಲ್ಲದೆ ಕೆಂಭಾವಿ ಹುಣಸಗಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.ಅದರಂತೆ ಕೆಂಭಾವಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ೧ ಕೋಟಿ ೬೯ ಲಕ್ಷ ರೂಪಾಯಿಗಳನ್ನು ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಮತ್ತು ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಹುಣಸಗಿಯಲ್ಲೂ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ನಿವೇಶನದ ಕೊರತೆಯಾಗಿದೆ.ಶೀಘ್ರವೆ ನಿವೇಶನ ಪಡೆಯಲಾಗುವುದು ಎಂದರು.
ಅಲ್ಲದೆ ಒಂದು ಸಾವಿರ ಜನರಿಗೆ ಚಾಲನಾ ಪರವಾನಿಗೆ ಮತ್ತು ಹೆಲ್ಮೆಟ್ ಒದಗಿಸುವುದಾಗಿ ಘೋಷಣೆ ಮಾಡಿದರು.ಜೊತೆಗೆ ಸುರಪುರ ನಗರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರಲ್ಲದೆ,ಎಲ್ಲರೂ ಮಾಸ್ಕ್ ಧರಿಸಿ ಮತ್ತು ಲಸಿಕೆ ಪಡೆಯುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಸ್ಪಿ ಡಾ:ಸಿ.ಬಿ.ವೇದಮೂರ್ತಿ ಮಾತನಾಡಿ,ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಅಪರಧ ಸಂಖ್ಯೆ ಕಡಿಮೆಯಾಗಲಿದೆ ಜೊತೆಗೆ ಅಪರಾಧ ಪತ್ತೆಗೂ ಸರಳವಾಗಲಿದೆ ಎಂದರು.ಅಲ್ಲದೆ ಇತ್ತೀಚೆಗೆ ಯಾದಗಿರಿ ಮತ್ತು ಶಹಾಪುರದಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ನೋಡಿದಾಗ ಜನರು ಎಚ್ಚೆತ್ತುಕೊಳ್ಳಬೇಕು ಮತ್ತು ಎಲ್ಲಾ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಹಾಕಿಕೊಳ್ಳಬೇಕು.ಮತ್ತು ಮಹಿಳೆಯರು ಹೊರಗಡೆ ಹೋಗುವಾಗ ತಮ್ಮ ಬ್ಯಾಗ್‌ಗಳಲ್ಲಿ ಖಾರದ ಪುಡಿ ಇಟ್ಟುಕೊಳ್ಳಿ ಇದರಿಂದ ಯಾರಾದರೂ ಕಳ್ಳತನಕ್ಕೆ ಬಂದರೆ ಅಂತವರನ್ನು ಸುಲಭವಾಗಿ ಹಿಡಿದುಕೊಡಲು ಸಾಧ್ಯವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಜಾರಾ ವೇಣುಗೋಪಾಲ ಜೇವರ್ಗಿ,ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಡಿವೈಎಸ್ಪಿ ವೆಂಕಟೇಶ ಉಗಿಬಂಡಿ,ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್, ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡ ನಾಯಕ (ತಾತಾ),ಮಹೇಂದ್ರ ನಾಯಕ,ಎಪಿಎಮ್‌ಸಿ ಅಧ್ಯಕ್ಷ ದುರ್ಗಪ್ಪ ಗೋಗಿಕೇರಾ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಸಿಪಿಐ ದೌಲತ್ ಎನ್.ಕೆ ಸೇರಿದಂತೆ ನಗರಸಭೆಯ ಎಲ್ಲಾ ಸದಸ್ಯರು ಹಾಗು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…