ಬಿಸಿ ಬಿಸಿ ಸುದ್ದಿ

ಬಿಜೆಪಿ ರಾಜ್ಯ ಕಚೇರಿಗೆ ಡಾ.ಅಂಬೇಡ್ಕರ್‌ ಫೋಟೋ ನೀಡಿ ದಲಿತ ಸಂಘರ್ಷ ಸಮಿತಿ ವಿನೂತನ ಪ್ರತಿಭಟನೆ

ಬೆಂಗಳೂರು ಜುಲೈ 14: ಸಿ ವಿ ರಾಮನ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್‌ ರಘು ಅವರ ನಿರ್ದೇಶನದಂತೆ ಅವರ ಬೆಂಬಲಿಗರು ಇತ್ತೀಚೆಗೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ್ದನ್ನ, ಭಾರತೀಯ ಜನತಾ ಪಕ್ಷ ಗಂಭಿರವಾಗಿ ಪರಿಗಣಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ ಸಿ ಎಸ್‌ ರಘು ಅವರು ಇಂದು ರಾಜ್ಯ ಬಿಜೆಪಿ ಕಚೇರಿಯ ಮುಂದೆ ವಿನೂತನ ಪ್ರತಿಭಟನೆ ನಡೆಸಿದರು.

ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿಗೆ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ ಎಸ್‌ ರಘು ಅವರ ನೇತೃತ್ವದ ತೆರಳಿತ್ತು. ಈ ತಂಡಕ್ಕೆ ಕಚೇರಿ ಒಳಗೆ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕಚೇರಿಯ ಮುಂಭಾಗದಲ್ಲೇ ವಿನೂತನವಾಗಿ ಪ್ರತಿಭಟನೆಯನ್ನು ಮಾಡಲಾಯಿತು. ವಿ ರಾಮನ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್‌ ರಘು ಅವರ ಬೆಂಬಲಿಗರು ಇತ್ತೀಚೆಗೆ ವಿಧಾನಸಭಾ ಕ್ಷೇಥ್ರದ ವ್ಯಾಪ್ತಿಯಲ್ಲಿ ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಿತ್ತುಹಾಕಿ ನೆಲಕ್ಕ ತಾಗುವಂತೆ ಎಳೆದುಕೊಂಡು ಹೋಗಿದ್ದಾರೆ.

ಈ ಮೂಲಕ ದೇಶದ ಮಹೊನ್ನತ ನಾಯಕರು ಹಾಗೂ ಸಂವಿಧಾನ ಶಿಲ್ಪಿ ಅವರಿಗೆ ಅವಮಾನ ಎಸಗಿದಂತಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಸ್‌ ರಘು ಅವರು ಬಹಿರಂಗ ಕ್ಷಮೆ ಕೇಳಬೇಕು, ಅವರ ಕ್ಷೇತ್ರ ವ್ಯಾಪ್ತಿಯಲ್ಲಿನ ಒಂದು ಆಸ್ಪತ್ರೆಗೆ ಡಾ.ಬಿ ಆರ್‌ ಅಂಬೇಡ್ಕರ್‌ ಹೆಸರನ್ನ ನಾಮಕರಣ ಮಾಡಬೇಕು ಮತ್ತು ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕು ಎನ್ನುವುದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಆಗ್ರಹವಾಗಿದೆ ಎಂದು ಡಾ ಸಿ ಎಸ್‌ ರಘು ಹೇಳಿದರು.

ಈ ಘಟನೆ ನಡೆದು ವಾರಗಳೇ ಕಳೆದಿದೆ, ಹಲವಾರು ಬಾರಿ ಪೊಲೀಸ್‌ ಇಲಾಖೆಗೆ ಹಾಗೂ ಬಿಜೆಪಿ ಮುಖಂಡರುಗಳಿಗೆ ದೂರು ನೀಡಿದ್ದೇವೆ. ಆದರೆ, ಪೊಲೀಸರ ವತಿಯಿಂದ ಮತ್ತು ಬಿಜೆಪಿ ಪಕ್ಷದ ವತಿಯಿಂದ ಶಾಸಕರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಗಮನ ಸೆಳೆಯುವ ನಿಟ್ಟಿನಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ್ದೇವು. ಆದರೆ, ನಮಗೆ ಕಚೇರಿಯ ಒಳಗೆ ಪ್ರವೇಶ ನೀಡದೇ ಇದ್ದ ಹಿನ್ನಲೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿಗೆ ಡಾ ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ನೀಡುವ ಮೂಲಕ ವಿನೂತನವಾಗಿ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಸಿ.ಎಸ್‌ ರಘು ತಿಳಿಸಿದರು.

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಈ ಬಗ್ಗೆ ಸೂಕ್ತ ಗಮನ ಹರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

6 hours ago