ಹೈದರಾಬಾದ್ ಕರ್ನಾಟಕ

ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ರಾಜಿ ಇಲ್ಲ: ರಾಜುಗೌಡ

ಸುರಪುರ: ಕ್ಷೇತ್ರದಲ್ಲಿ ನಡೆಯುತ್ತಿರುವ ಯಾವುದೇ ಕಾಮಗಾರಿಗಳ ನಿರ್ಮಾಣದಲ್ಲಿ ಉತ್ತಮ ಗುಣಮಟ್ಟವನ್ನು ಕಾಪಾಡಿ,ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ರಾಜಿ ಇಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹಾಗು ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಯಾವುದೇ ಗುತ್ತಿಗೆದಾರರು ಕಾಮಗಾರಿ ಸರಿಯಾಗಿ ಮಾಡದಿದ್ದಲ್ಲಿ ರಾಜಿಯಾಗಬೇಡಿ,ನಾನು ಯಾರ ಪರವಾಗಿಯೂ ಕರೆ ಮಾಡುವುದಿಲ್ಲ,ಅಧಿಕಾರಿಗಳು ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಒತ್ತು ನೀಡಿ ಜೊತೆಗೆ ಕಡ್ಡಾಯವಾಗಿ ಪ್ರತಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಿರಿಯ ಅಭಿಯಂತರ (ಜೆಇ) ಕಡ್ಡಾಯವಾಗಿ ಇರಲೇಬೇಕು ಎಂದು ತಿಳಿಸಿದರು.

ಇನ್ನು ಕೋವಿಡ್ ೩ನೇ ಅಲೆಗೆ ಬೇಕಾದ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಿ.ಈಗಾಗಲೇ ಹುಣಸಗಿ ತಾಲೂಕಿಗೆ ೧.೨೫ ಕೋಟಿ,ಸುರಪುರ ತಾಲೂಕಿಗೆ ೧ ಕೋಟಿ ಹಾಗು ತಿಂಥಣಿ ಭಾಗಕ್ಕೆ ೭೫ ಲಕ್ಷ ಒದಗಿಸಲಾಗಿದೆ,೩ನೇ ಅಲೆ ಬರುವ ಮುನ್ನವೆ ಎಲ್ಲರು ಲಸಿಕೆಯಲ್ಲಿ ಪಡೆದುಕೊಂಡಲ್ಲಿ ಕೊರೊನಾ ಯಾವುದೇ ಹಾನಿ ಮಾಡುವುದಿಲ್ಲ.ಆದ್ದರಿಂದ ಎಲ್ಲರು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ತಿಳಿಸಿದರು.ಅಲ್ಲದೆ ಶಾಲೆಗಳು ಬಂದಾಗಿದ್ದರಿಂದ ೧೪ ವರ್ಷದೊಳಗಿನ ಮಕ್ಕಳು ಬರೀ ಆಟದ ಕಡೆಗೆ ಮತ್ತು ೧೪ ವರ್ಷ ಮೇಲ್ಪಟ್ಟ ಮಕ್ಕಳನ್ನು ಗ್ರಾಮೀಣ ಭಾಗದಲ್ಲಿ ದನ ಕುರಿಗಳ ಕಾಯಲು ಮತ್ತು ಹೊಲಗಳಲಿ ಕೆಲಸಕ್ಕೆ ತೊಡಗಿಸುತ್ತಿದ್ದಾರೆ ಇನ್ನು ನಗರ ಪ್ರದೇಶದಲ್ಲಿ ಮಕ್ಕಳು ಮನೆಯಲ್ಲಿಯೇ ಇರವುದರಿಂದ ತೂಕ ಹೆಚ್ಚಾಗುವುದರ ಜೊತೆಗೆ ವಿವಿಧ ಕಾಯಿಲೆಗಳಿಗೂ ಗುರಿಯಾಗುತ್ತಿದ್ದಾರೆ.ಆದ್ದರಿಂದ ಶಾಲೆಗಳನ್ನು ಆರಂಭಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಇನ್ನು ನಾರಾಯಣಪುರ ಭಾಗದಲ್ಲಿ ಮಲೇರಿಯಾ ಪ್ರಕರಣಗಳು ಹಾಗು ಯಾಳಗಿಯಲ್ಲಿ ವಾಂತಿ ಭೇದಿ ಪ್ರಕರಣಗಳು ಕಾಣಿಸಿಕೊಂಡಿವೆ.ಆದ್ದರಿಂದ ಗ್ರಾಮಗಳಲ್ಲಿನ ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದರು.ಅಲ್ಲದೆ ಅನೇಕ ಗ್ರಾಮಗಳಲ್ಲಿ ನೆನೆಗುದಿಗೆ ಬಿದ್ದಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ,ಇದೇ ಆಗಸ್ಟ್ ೧೫ಕ್ಕೆ ಲೋಕಾರ್ಪಣೆಗೊಳಿಸಲು ಸಿದ್ಧತೆ ಮಾಡಿ ಎಂದು ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತಪ್ಪ ಅಂಬಲಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಮಾತನಾಡಿ,ಕಳೆದ ಅನೇಕ ದಿನಗಳಿಂದ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಸೊನ್ನೆಯಾಗಿದೆ,ಅಲ್ಲದೆ ೧ಲಕ್ಷ ೯ ಸಾವಿರ ೩೧೮ ಜನರಿಗೆ ಲಸಿಕೆ ಹಾಕಲಾಗಿದ್ದು ಒಟ್ಟು ೨ ಲಕ್ಷ ೭೫ ಸಾವಿರ ಜನರಿಗೆ ಲಸಿಕೆ ಹಾಕಲಾಗುವುದು ಅದರಲ್ಲಿ ೫೭೯೨ ವಿದ್ಯಾರ್ಥಿಗಳಿಗೂ ಲಸಿಕೆ ಹಾಕಲಾಗಿದೆ ಎಂದರು.

ಕ್ಷೇತ್ರಶೀಕ್ಷಣಾಧಿಕಾರಿ ಮಹಾದೇವರಡ್ಡಿ ಮಾತನಾಡಿ,ಇದೇ ೧೯ ಮತ್ತು ೨೦ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.ಒಟ್ಟು ೫೬೧೫ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಅದಕ್ಕಾಗಿ ೨೭ ಕೇಂದ್ರಗಳಲ್ಲಿ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಜೆಸ್ಕಾಂ ಇಲಾಖೆ,ಲೋಕೊಪಯೋಗಿ ಇಲಾಖೆ,ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ವಿಭಾಗ,ಕುಡಿಯುವ ನೀರು,ಅಕ್ಷರ ದಾಸೋಹ,ಅರಣ್ಯ ಇಲಾಖೆ,ಮಹಿಳಾ ಮತ್ತ ಮಕ್ಕಳ ಕಲ್ಯಾಣ ಇಲಾಖೆ,ಕೃಷಿ,ತೋಟಗಾರಿಕೆ,ಅಲ್ಪಸಂಖ್ಯಾತರ,ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಕೊರೊನಾ ಸಂದರ್ಭದಲ್ಲಿ ಅಮೋಘವಾಗಿ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆಗೆ ಗೌರವಾರ್ಥವಾಗಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ರಾಜಕುಮಾರ,ಸುರಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ,ಹುಣಸಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಬಾಗಲಿ ಹಾಗು ಯೋಜನಾಧಿಕಾರಿ ಕುಮಲಯ್ಯ,ತಾ.ಪಂ ವ್ಯವಸ್ಥಾಪಕ ವೆಂಕೋಬ ಬಾಕ್ಲಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago