ದಾರವಾಡ: ಮಾರುತಿ ಭೋಯಿ ಅವರು ಅಪರ ಕೇಂದ್ರಿಯ ಭವಿಷ್ಯ ನಿಧಿ ಆಯುಕ್ತರಾಗಿ, ಕರ್ನಾಟಕ ಮತ್ತು ಗೋವಾ ವಲಯದ ಭವೀಷ್ಯ ನಿಧಿ ಭವನ, ನವನಗರ, ಹುಬ್ಬಳ್ಳಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಹುಬ್ಬಳ್ಳಿ ವಲಯದ ವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ (ಬೆಂಗಳೂರು ಹೊರತುಪಡಿಸಿ) ಮತ್ತು ಗೋವಾ ರಾಜ್ಯಕ್ಕೆ ವ್ಯಾಪಿಸಿದೆ. ಈ ವಲಯದಲ್ಲಿ ಕಾರ್ಮಿಕ ಭವಿಷ್ಯ ನಿಧಿಯ ಹತ್ತು ಪ್ರಾದೇಶಿಕ ಕಚೇರಿಗಳಿವೆ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಕಲಬುರಗಿ, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಮತ್ತು ಗೋವಾಗಳಲ್ಲಿವೆ.
ಮಾರುತಿ ಭೋಯಿ ಅವರು 24 ವರ್ಷಗಳಿಗಿಂತ ಹೆಚ್ಚು ಕಾಲ ಆಡಳಿತಾತ್ಮಕ ಮತ್ತು ಕ್ರಿಯಾತ್ಮಕ ಅನುಭವವನ್ನು ಹೊಂದಿದ್ದಾರೆ. ಇವರು ದೇಶಾದ್ಯಂತ ಕೇರಳ, ಕರ್ನಾಟಕ, ತಮಿಳುನಾಡು, ಅಸ್ಸಾಂ, ತೆಲಂಗಾಣ, ಉತ್ತರಪ್ರದೇಶ ಮತ್ತು ನವದೆಹಲಿಯ ಮುಖ್ಯ ಕಚೇರಿಗಳಲ್ಲಿ ವಿವಿಧ ಸಾಮರ್ಥ್ಯಗಳಲ್ಲಿ ಕೆಲಸ ಮಾಡಿದ ಅನುಭವ ಪಡೆದವರಾಗಿದ್ದಾರೆ.
ಕಾರ್ಮಿಕರ ಭವಿಷ್ಯ ನಿಧಿ ಸೇವಾ ವಿತರಣೆಯ ಅನುಷ್ಠಾನಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗಾಗಿ, ಅವರ ಕಚೇರಿಯನ್ನು ವೈಯಕ್ತಿಕವಾಗಿ ಅಥವಾ ಇ-ಮೇಲ್ ಮೂಲಕ acc.hubligoa@epfindia.gov.in ಸಂಪರ್ಕಿಸಬಹುದು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…