ಬಿಸಿ ಬಿಸಿ ಸುದ್ದಿ

ಮನೆಗೊಂದು ಮಗುವಿನಂತೆ ಮನೆಗೊಂದು ಗಿಡ ಬೆಳಸಿ:ಹಳ್ಳೆ ಕರೆ

ಚಿತ್ತಾಪುರ:ಪರಿಸರ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮನೆಗೊಂದು ಮಗುವಿನಂತೆ ಮನೆಗೊಂದು ಮರ ಬೆಳೆಸಿ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದ್ದಾರೆ.

ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಂಸ್ಕೃತಿ ಸಂಘ ಕಲಬುರ್ಗಿ ಹಾಗೂ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಪರಿಷತ್ ನಾವದಗಿ ವತಿಯಿಂದ ಸಸಿ ವಿತರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಹಳ್ಳೆ ಅವರು ಪರಿಸರ ಕಾಪಾಡುವುದು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಗಿಡ ನೆಡುವುದು ಮುಖ್ಯವಲ್ಲ ಅದನ್ನು ಮಗುವಿನಂತೆ ಸಂರಕ್ಷಣೆ ಮಾಡಬೇಕು.ಕರೋನಾದ ಸಂದರ್ಭದಲ್ಲಿ ಆಮ್ಲಜನಕದ ಮಹತ್ವವನ್ನು ಎಲ್ಲರಿಗೂ ಅರ್ಥವಾಗಿದೆ.ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಪರಿಸರದ ಸಮತೋಲನವನ್ನು ಕಾಪಾಡಬೇಕು.ಗಿಡಗಳನ್ನು ನೀಡುವುದರಿಂದ ಸಮಯಕ್ಕೆ ಸರಿಯಾಗಿ ಮಳೆ-ಬೆಳೆ ಚೆನ್ನಾಗಿ ಆಗುತ್ತದೆ ಎಂದು ಹೇಳಿದರು.

ಸಂಘದ ಜಿಲ್ಲಾ ಸಂಚಾಲಕ ನಾಗಯ್ಯಾ ಸ್ವಾಮಿ ಅಲ್ಲೂರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಘದ ಕಾರ್ಯ ವೈಖರಿಯನ್ನು ತಿಳಿಸಿದರು ಪ್ರತಿ ತಾಲೂಕಿನಲ್ಲಿ 5000 ಗಿಡಗಳನ್ನು ನೆಡುವ ಗುರಿಯಾಗಿದ್ದು,1 ವರ್ಷದಲ್ಲಿ 5 ಕೋಟಿ ಗಿಡಗಳನ್ನು ನೆಡುವ ಗುರಿ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೊಂದಿದ್ದಾರೆ.ಅವರ ಗುರಿ ಈಡೇರಿಸಲು ನಾವೆಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಸವೇಶ್ವರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ.ಪ್ರಭುರಾಜ ಕಾಂತ, ವಿಕಾಸ ಅಕಾಡೆಮಿ ತಾಲೂಕ ಸಂಚಾಲಕ ಮನೋಹರ ಹಡಪದ್,ಸಾಹೇಬರೆಡ್ಡಿ ಬಂಗಾರಿ,ಲಲಿತಾ ರೇಶ್ಮಿ,ಶೈಲಜಾ ಹರಸೂರ್,ಶಂಭುಲಿಂಗ ವಿಶ್ವಕರ್ಮ,ದೇವಿಂದ್ರಪ್ಪಾ ತಳವಾರ,ಕಸ್ತೂರಿ, ಚಂದ್ರು ಅವಂಟಿ,ಸಾಬಣ್ಣ,ನಾಗರಾಜ ಕುಲಕರ್ಣಿ,ಅಕ್ಕಮಹಾದೇವಿ,ಸೇರಿದಂತೆ ಅನೇಕರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago