ಶೈಕ್ಷಣಿಕ ಗೊಂದಲ: ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ, ಬೃಹತ್ ಜನಜಾಗೃತಿ

0
42

ಕಲಬುರಗಿ: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು , ಸರ್ಕಾರಿ ಶಾಲೆಗಳ ದುರ್ವ್ಯವಸ್ಥೆ , ಖಾಸಗಿ ಶಿಕ್ಷಕರ ಸಮಸ್ಯೆ , ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಸರ್ಕಾರದ ಹೊಣೆಗೇಡಿತನದ ಪರಿಣಾಮವಾಗಿ ಇಂದು ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಸಂಕಷ್ಟಕ್ಕೀಡಾಗಿದೆ. ಶಾಲಾ ಶುಲ್ಕ ಗಳ ವಿಚಾರದಲ್ಲಿಯೂ ಸಹ ಪೋಷಕ ವರ್ಗ ಸಮಸ್ಯೆಗೀಡಾಗಿದೆ.ಈ ಎಲ್ಲ ಗೊಂದಲಗಳಿಂದಾಗಿ ಲಕ್ಷಾಂತರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಇವುಗಳೆಲ್ಲದರ ನಿವಾರಣೆಗಾಗಿ ರಾಜ್ಯಾದ್ಯಂತ ಸಹಿಸಂಗ್ರಹಣಾ ಹಾಗೂ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದೆಂದು ಪಕ್ಷದ ಮಾಧ್ಯಮ ವಕ್ತಾರೆ ಅಂಜನಾ ಯತನೂರ್ ಹೇಳಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಬಗೆಹರಿಸಲು ಒತ್ತಾಯಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಸಾವಿರಾರು ಕಾರ್ಯಕರ್ತರು ಗಳು ಸತತ 15 ದಿವಸಗಳ ಕಾಲ ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕನಿಷ್ಠ 5 ಲಕ್ಷ ಮನೆಗಳಿಗೆ ತೆರಳಿ ಸಹಿ ಸಂಗ್ರಹಣೆ ಹಾಗೂ ಬೃಹತ್ ಜನಾಂದೋಲನ ಕಾರ್ಯ ಕ್ರಮವನ್ನು ನಡೆಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಜನ ಜಾಗೃತಿಗಾಗಿ ಕರಪತ್ರ, ಎಲ್.ಇ.ಡಿ ವಾಹನ, ವಿಚಾರಗೋಷ್ಠಿ ಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಲು ಈಗಾಗಲೇ ಹಲವು ರೂಪುರೇಷೆಗಳನ್ನು ಪಕ್ಷವು ಕೈಗೊಂಡಿದೆ.

ಈ ಅಭಿಯಾನ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಹ ಈ ಅಭಿಯಾನಕ್ಕೆ ಚಾಲನೆ ದೊರಕಲಿದೆ ಎಂದ ಅವರು, ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಸಮಸ್ಯೆಗೆ ಆಮ್ ಆದ್ಮಿ ಪಕ್ಷವು ರಾಜ್ಯದ ಜನತೆಯ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಜೀವ್ ಕುಮಾರ ಕರಿಕಲ, ಇಮ್ರಾನ್ ಅಹ್ಮದ್, ಕಿರಣ ರಾಠೋಡ, ಶೇಖರ್ ಸಿಂಗ್ ಇನ್ನಿತರರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here