ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಒಕ್ಕೂಟದ ಪ್ರತಿಭಟನೆ

0
8

ಕಲಬುರಗಿ: ರಾಷ್ಟ್ರೀಯ ಪ್ರತಿಭಟನಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎಲ್ಲರಿಗೂ ಉಚಿತ ವ್ಯಾಕ್ಸಿನ್, ಎನ್.ಪಿ.ಎಸ್.ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಕೊಳ್ಳಬೇಕೆಂಬ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟವು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಎಲ್ಲಾ ಸರ್ಕಾರಿ ನೌಕರಿಗೆ ಆಧ್ಯತೆ ಮೇಲೆ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಮತ್ತು ರಾಜ್ಯದ ಎಲ್ಲಾ ಜನತೆಗೆ ಉಚಿತ ಕೋವಿಡ್ ಲಸಿಕೆಯನ್ನು ನೀಡಬೇಕು. ಸರ್ಕಾರವು ಮುಟ್ಟುಗೋಲು ಹಾಕಿಕೊಂಡಿರುವ ಜನವರಿ 2020 ರಿಂದ ಜೂನ್ 2021 ರವರೆಗಿನ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳದ ದರವನ್ನು ಬಿಡುಗಡೆಗೊಳಿಸಬೇಕು. ಪಿಎಫ್‍ಆರ್‍ಡಿಎ/ ಎನ್‍ಪಿ.ಎಸ್ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಎಲ್ಲಾ ನೌಕರರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೆಕು.

Contact Your\'s Advertisement; 9902492681

50 ವರ್ಷ ದಾಟಿದ ನೌಕರರಿಗೆ ಕಡ್ಡಾಯ ನಿವೃತ್ತಿಗೊಳಿಸುವ ಕೇಂದ್ರ ಸರ್ಕಾರದ ನೀತಿಯನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರ್ಕಾರದ ಖಾಲಿ ಹುದ್ದೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ತಾತ್ಕಾಲಿಕ, ಅತಿಥಿ, ಅರೆಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವಿವಿಧ ಕೋರ್ಟುಗಳ ಆದೇಶದಂತೆ ಖಾಯಂ ನೌಕರರಿಗೆ ಸಮಾನವಾದ ವೇತನ- ಭತ್ಯೆಗಳನ್ನು ನೀಡಬೇಕು ಹಾಗೂ ಅವರನ್ನು ಸರ್ಕಾರಿ ಸೇವೆಯಲ್ಲಿ ನಿಯಮಾನುಸಾರ ಖಾಯಂಗೊಳಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಶರಣಬಸವನಗೌಡ ಪಾಟೀಲ್ ತಿಳಿಸಿದರು.

ಆಡಳಿತ ಸುಧಾರಣಾ ಆಯೋಗ-2ರ ಪ್ರಸ್ತಾವನೆಯಲ್ಲಿ ಇಲಾಖೆ/ಹುದ್ದೆಗಳ ಕಡಿತದ ಪ್ರಕ್ರಿಯೆಯನ್ನು ಕೈಬಿಡಬೇಕು. ಜುಲೈ 2017 ರಿಂದ ರಾಜ್ಯ ನೌಕರರಿಗೆ ಜಾರಿಗೆ ಬಂದಿರುವ 6ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಗೆ ಬಂದು ಐದು ವರ್ಷಗಳಾಗುತ್ತಲಿರುವ ಹಿನ್ನೆಲೆಯಲ್ಲಿ, ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ವೇತನ ಅಯೋಗವನ್ನು ರಚಿಸಬೇಕು.

ಕೋವಿಡ್-19 ವಾರಿಯರ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಕೋವಿಡ್‍ನಿಂದಾಗಿ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ಕನಿಷ್ಠ 50 ಲಕ್ಷ ರೂ. ಪರಿಹಾರವನ್ನು ನೀಡಬೇಕು ಹಾಗೂ ಕೋವಿಡ್ ಕರ್ತವ್ಯ ನಿರ್ವಹಿಸುವ ಎಲ್ಲಾ ನೌಕರರಿಗೂ ಮಾಸಿಕ ಕನಿಷ್ಠ 10 ಸಾವಿರ ರೂ. ವಿಶೇಷ ಭತ್ಯೆ ನೀಡಬೇಕು. ನೌಕರರು ಮತ್ತು ಪಿಂಚಣಿದಾರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಬೆಲೆ ಏರಿಕೆ ನಿಯಂತ್ರಿಸಬೆಕು ಮತ್ತು ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು.

ಪ್ರಾಥಮಿಕ ಶಾಳೆಗಳಲ್ಲಿ ಬೋಧಿಸುತ್ತಿರುವ ಪದವೀಧರ ಶಿಕ್ಷಕರಿಗೆ 6 ರಿಂದ 8ನೇ ತರಗತಿ ಶಿಕ್ಷಕರ ಹುದ್ದೆಗೆ ಹಿಂದಿನಂತೆ ಮುಂಬಡ್ತಿ ನೀಡುವ ಬಗ್ಗೆ ಇದ್ದ ಅವಕಾಶವನ್ನು ಕೆ.ಎ.ಟಿ ಯು ರದ್ದುಪಡಿಸಿರುವ ಆದೇಶದ ವಿರುದ್ಧ ಸರ್ಕಾರವು ಮೇಲ್ಮನವಿ ಸಲ್ಲಿಸುವುದರೊಂದಿಗೆ ಸುಗ್ರೀವಾಜ್ಞೆ ಮೂಲಕ ಸಿ. ಮತ್ತು ಆರ್ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕು ಹಾಗೂ ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ರಿಯಲ್ಲಿ ಬರುವ ಸರ್ಕಾರಿ ನೌಕರರ ನೇಮಕಾತಿ, ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ವಯಿಸುವಂತೆ ಜಾರಿಗಳಿಸಲಾದ 371ಜೆ ಯಲ್ಲಿ ಶಿಫಾರಸ್ಸು ಮಾಡಿದಂತೆ ಸದರಿ ಅನ್ಯಾಯವನ್ನು ಸರಿಪಡಿಸಬೇಕು ಎಂದು ಹಲವಾರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದರು.

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಸಿ., ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಬಿ.ಎಸ್.ಭಾಗೋಡಿ, ಕೇಂದ್ರ ಕಾರ್ಯಕಾರಿ ಸಮಿತಿ ಬೆಂಗಳೂರಿನ ಜಂಟಿ ಕಾರ್ಯದರ್ಶಿ ಪ್ರಭು ಕಲಶೆಟ್ಟಿ, ಕೇಂದ್ರ ಕಾರ್ಯಕಾರಿ ಸಮಿತಿಯ ಕಾನೂನು ಸಲಹೆಗಾರ ಮಹಾವೀರ ಕಾಸರ, ಹಿರಿಯ ಉಪಾಧ್ಯಕ್ಷ ಡಿ.ಬಿ. ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here