ಆಳಂದ: ಭಾರತೀಯ ಜನತಾ ಪಕ್ಷಕ್ಕೆ ಅದರ ಕಾರ್ಯಕರ್ತರೇ ನಿಜವಾದ ಶಕ್ತಿಯಾಗಿದ್ದಾರೆ ಹೀಗಾಗಿ ಅದು ದೇಶದ ತುಂಬೆಲ್ಲಾ ಅಧಿಕಾರ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಅಭಿಪ್ರಾಯಪಟ್ಟರು.
ಶನಿವಾರ ಆಳಂದ ಪಟ್ಟಣದ ಆರ್ಯ ಸಮಾಜದಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ನಾಯಕರು ಕಾರ್ಯಕರ್ತರನ್ನು ಹಿಂಬಾಲಿಸುವ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಈ ಪಕ್ಷದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲವಿದೆ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತ ಕೂಡ ದೊಡ್ಡ ದೊಡ್ಡ ಹುದ್ದಗೆಳಿಗೆ ಏರಿರುವ ಇತಿಹಾಸವಿದೆ ಆದರಿಂದ ಜನತೆ ಕೂಡ ಭಾರತೀಯ ಜನತಾ ಪಕ್ಷದ ಬಗ್ಗೆ ಆಶಾಭಾವನೆ ಹೊಂದಿದ್ದಾರೆ ಎಂದು ಹೇಳಿದರು.
ನಾವು ಬೇರೆ ಪಕ್ಷದಲ್ಲಿ ಇದ್ದಾಗ ಈ ರೀತಿ ಕಾರ್ಯಕರ್ತರನ್ನು ತಯಾರು ಮಾಡುವ, ಅವರಿಗೆ ಅವಕಾಶ ನೀಡುವ ಯಾವುದೇ ಕಾರ್ಯಗಳು ಆಗುತ್ತಿರಲಿಲ್ಲ ಆದರೆ ಭಾರತೀಯ ಜನತಾ ಪಕ್ಷದಲ್ಲಿ ನಿಷ್ಟೆಯಿಂದ ಸೇವೆ ಸಲ್ಲಿಸಿದ ಯಾವ ಕಾರ್ಯಕರ್ತನಿಗೂ ನಿರಾಶೆಯಾಗುವುದಿಲ್ಲ ಎಂದರು.
ಆಳಂದ ಮಂಡಲದಲ್ಲಿ ಭಾರತೀಯ ಜನತಾ ಪಕ್ಷದ ಬೇರುಗಳು ಬಹಳ ಗಟ್ಟಿಯಾಗಿವೆ. ಕಳೆದ ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಅತೀ ಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ ಕೀರ್ತಿ ಆಳಂದ ಮತಕ್ಷೇತ್ರದ ಜನತೆಗೆ ಸಲ್ಲುತ್ತದೆ ಈ ಬಾರಿಯೂ ಜನತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಅದಕ್ಕಾಗಿ ಕಾರ್ಯಕರ್ತರು, ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ನುಡಿದರು.
ಕಾರ್ಯಕಾರಣಿಯಲ್ಲಿ ಮೂರು ಅವಧಿಗಳು ಜರುಗಿದವು. ಶ್ಯಾಮಪ್ರಸಾದ ಮುಖರ್ಜಿ ಜೀವನ, ಪಕ್ಷದ ಸಂಘಟನಾತ್ಮಕ ಜವಾಬ್ದಾರಿ, ಸಮಾರೋಪ ಸಮಾರಂಭ ನಡೆಯಿತು. ಶಾಸಕ ಸುಭಾಷ್ ಆರ್ ಗುತ್ತೇದಾರ, ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ, ಈಶ್ವರಸಿಂಗ್ ಠಾಕೂರ ಮಾತನಾಡಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಎನ್‍ಇಕೆಆರ್‍ಟಿಸಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ, ಜಿಲ್ಲಾ ಪ್ರ. ಕಾರ್ಯದರ್ಶಿ ಅಶೋಕ ಬಗಲಿ, ಮುಖಂಡ ಸಂಜಯ ಮಿಸ್ಕಿನ್ ವೇದಿಕೆಯ ಮೇಲಿದ್ದರು.
ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುಜ್ಞಾನಿ ಪೊದ್ದಾರ ವಂದೇ ಮಾತರಂ ಗೀತೆ ಪ್ರಸ್ತುತ ಪಡಿಸಿದರು. ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶರಣು ಕುಮಸಿ ನಿರೂಪಿಸಿದರೆ, ಪ್ರಕಾಶ ಮಾನೆ ವಂದಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…