ಶಹಾಬಾದ:ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಿಪ್ಪಾನ್ ಎಕ್ಸ್‍ಪ್ರೆಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಶನಿವಾರ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹಾಗೂ ಬಿಜೆಪಿ ಮುಖಂಡೆ ಜಯಶ್ರೀ ಮತ್ತಿಮಡು ನೇತೃತ್ವದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‍ನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಕೋವಿಡ್ 2 ನೇ ಅಲೆಯಲ್ಲಿ ಆಕ್ಸಿಜನ್ ಕೊರತೆ ಎಲ್ಲರನ್ನೂ ಕಾಡಿತ್ತು.ಅಲ್ಲದೇ ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಜನರು ಪರದಾಡಿದರು. ಬಹುತೇಖ ಜನರು ಸಾವನಪ್ಪಿದರು. ಆದರೆ ನಿಪ್ಪಾನ್ ಸಂಸ್ಥೆ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ವಿತರಣೆ ಮಾಡುವ ಮೂಲಕ ಸೋಂಕಿತರ ಚಿಕಿತ್ಸೆಗೆ ನೆರವಾಗಲಿದೆ. ಇದರಿಂದ ಈ ಭಾಘದ ಜನರಿಗೆ ಬಹಳಷ್ಟು ಉಪಯೋಗವಾಗಲಿದೆ.ವೈದ್ಯರು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಚಿಕಿತ್ಸೆ ನೀಡಬೇಕೆಂದು ಮನವಿ ಮಾಡಿದರು.
ಬಿಜೆಪಿ ಮುಖಂಡೆ ಜಯಶ್ರೀ ಮತ್ತಿಮಡು ಮಾತನಾಡಿ, ಕೋವಿಡ್ ಪ್ರಾರಂಭದಿಂದ ಕೋವಿಡ್ ಸಮಯದಲ್ಲಿ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸಿದ ವೈದ್ಯರ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳ ದೊಡ್ಡದು.
ನಿಪ್ಪಾನ್ ಕಂಪನಿಯವರು ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಕೊರತೆಯ ಸಮಯದಲ್ಲಿ ನೆರವಿನ ಹಸ್ತ ನೀಡಿದೆ ಎಂದು ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. 3 ನೇ ಅಲೆಯಲ್ಲಿ ಮಕ್ಕಳ ಕುರಿತು ಪಾಲಕರು ಎಚ್ಚರಿಕೆ ವಹಿಸಬೇಕು. ಬರುವ ದಿನಗಳಲ್ಲಿ ಕೋವಿಡ್ ಚಿಕಿತ್ಸೆಗೆ ಯಾವುದೇ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ನಿಪ್ಪಾನ್ ಸಂಸ್ಥೆ ಉಪಾಧ್ಯಕ್ಷ ಶ್ರೀನಿವಾಸ, ವ್ಯವಸ್ಥಾಪಕ ಬಿಜ್ಜು, ತಾಲೂಕಾ ಆರೋಗ್ಯ ಅಧಿಕಾರಿ ದೀಪಕ ಪಾಟೀಲ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮುಖಂಡ ಗೋರಖನಾಥ ಶಾಖಾಪೂರ, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷ ಭಾಗಿರಥಿ ಗುನ್ನಾಪೂರ,ನಗರ ಅಧ್ಯಕ್ಷೆ ಜಯಶ್ರೀ ಸೂಡಿ, ನಗರಸಭೆಯ ಸದಸ್ಯರಾದ ಪಾರ್ವತಿ ಪವಾರ, ರವಿ ಚವ್ಹಾಣ,ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ, ನಿಂಗಣ್ಣ ಹುಳಗೋಳಕರ್, ದತ್ತು, ಸಂಜೀವಕುಮಾರ ಸೂಡಿ, ಮೋಹನಕುಮಾರ ಗಾಯಕವಾಡ, ಯುಸೂಫ್ ನಾಕೇದಾರ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…