ಸುರಪುರ: ನಗರದ ವಾರ್ಡ್ ಸಂಖ್ಯೆ 10 ರಲ್ಲಿರುವ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಬೌದ್ಧ ಕುಟೀರ ನಿರ್ಮಿಸುವಂತೆ ಮೂಲನಿವಾಸಿ ಅಂಬೇಡ್ಕರ್ ಸೇನೆಯಿಂದ ನಗರಸಭೆಗೆ ಮನವಿ ಮಾಡಲಾಗಿದೆ.
ಶನಿವಾರ ಬೆಳಿಗ್ಗೆ ಮೂಲನಿವಾಸಿ ಅಂಬೇಡ್ಕರ್ ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ್ ಹುಲಿಮನಿ ನಗರಸಭೆ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿ, ಬುದ್ಧ ವಿಹಾರವನ್ನು ರಾಷ್ಟ್ರ ಮಟ್ಟದ ಪ್ರವಾಸಿ ತಾಣವನ್ನಾಗಿ ನಿರ್ಮಾಣ ಮಾಡಲು ಚಿಂತನೆ ನಡೆದಿದೆ.
ಅಲ್ಲದೆ ಬೌದ್ಧ ಧಮ್ಮದ ಉನ್ನತಿಗಾಗಿ,ಸಮ ಸಮುದಾಯಗಳ ಶಾಂತಿಗಾಗಿ ಪೂಜ್ಯ ಬಂತೇಜಿಯವರು ಮತ್ತು ಬಿಕ್ಕು ಸಂಘದವರು ಬಂದು ಇಲ್ಲಿ ನೆಲೆಸುವ ಅವಶ್ಯವಿದೆ.ಆದ್ದರಿಂದ ಬುದ್ಧ ವಿಹಾರದಲ್ಲಿ ಬಂತೇಜಿಯವರು ವಾಸಿಸಲು ನಗರಸಭೆಯ ವಿಶೇಷ ನಿಧಿ ಮುಕ್ತ ಯೋಜನೆಯಲ್ಲಿ ಬೌದ್ಧ ಕುಟೀರವನ್ನು ನಿರ್ಮಾಣ ಮಾಡುವಂತೆ ವಿನಂತಿಸಿದರು.
ಅಲ್ಲದೆ ದಲಿತ ಸಮಾಜದ ಜನರ ಮೃತ ದೇಹ ದಹನಮಾಡಲು ಸ್ಥಳದ ಸಮಸ್ಯೆ ತುಂಬಾ ಇದೆ,ಆದಕಾರಣ ಚಿತಾಭಸ್ಮ ಉಗ್ರಾಣವನ್ನು ನಿಮಿಸಲು ಮುಂಬರುವ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದು ಶೀಘ್ರದಲ್ಲಿ ಕಾರ್ಯಾರಂಭ ಮಾಡಬೇಕೆಂದು ವಿನಂತಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಂದಪ್ಪ ಪಂಚಮ್,ಹಣಮಂತ ರತ್ತಾಳ, ರಾಜು ಬಡಿಗೇರ ಇತರರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…