ಶಾಸಕ ಡಾ. ಅಜಯ್ ಸಿಂಗ್ ಕೆಲಸ- ಕಾರ್ಯಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೆಚ್ಚುಗೆ

0
15

ಕಲಬುರಗಿ/ಜೇವರ್ಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಶನಿವಾರ ವಿಜಯಪುರಕ್ಕೆ ತೆರಳುವ ದಾರಿಯಲ್ಲಿ ಜೇವರ್ಗಿ ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಆಯೋಜಿಸಿದ್ದ ಸತ್ಕಾರ ಸಮಾರಂಭದಲ್ಲಿ ಶಾಸಕ ಡಾ. ಅಜಯ್ ಸಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಹಾಗೂ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದರು.

ನಂತರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರನ್ನು ಉz್ದÉೀಶಿಸಿ ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಜೇವರ್ಗಿ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಶಾಸಕ ಡಾ.ಅಜಯಸಿಂಗ್ ಅವರ ಕಾರ್ಯ ಶ್ಲಾಘನೀಯ ಎಂದರು.

Contact Your\'s Advertisement; 9902492681

ಶಾಸಕ ಡಾ. ಅಜಯಸಿಂಗ್ ವಿಧಾನಸಭೆಯ ವಿರೋಧಪಕ್ಷದ ಮುಖ್ಯ ಸಚೇತಕರಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಜೊತೆಗೇ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಶಾಸಕರಾಗಿ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಡಾ. ಅಜಯ್ ಸಿಂಗ್ ಅವರ ಬೆನ್ನು ತಟ್ಟಿ ಪೆÇ್ರೀತ್ಸಾಹಿಸುತ್ತ ಮೆಚ್ಚುಗೆ ನುಡಿಗಳನ್ನಾಡಿದರು. ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಡಾ.ಅಜಯಸಿಂಗ್, ಕಾಂಗ್ರೆಸ್ ಪಕ್ಷದ ಜೇವರ್ಗಿ ಪ್ರಮುಖರು ಸಮಾರಂಭದಲ್ಲಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here