ಕಲಬುರಗಿ: ತೋಳಗಳ ದಾಳಿಗೆ 15ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಶಹಾಬಾದ ತಾಲೂಕಿನ ತರನಳ್ಳಿ ಗ್ರಾಮದ ಹತ್ತಿರ ನಡೆದಿದೆ.
ಸುರಪೂರ ತಾಲೂಕಿನ ಅಮ್ಮಾಪೂರದ ವೆಂಕಪ್ಪ ಬೆನಕನಹಳ್ಳಿ ಅವರಿಗೆ ಸೇರಿದ 15ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಕುರಿಗಳ ಹಿಂಡುಗಳನ್ನು ಊರಿನಿಂದ ಊರಿಗೆ ಹೋಗುವ ಇವರು ತರನಳ್ಳಿ ಗ್ರಾಮದ ಹತ್ತಿರ ನೆಲೆಸಿಕೊಂಡಿದ್ದರು.ರಾತ್ರಿ ಮಳೆ ಬರುವ ಸಮಯದಲ್ಲಿ ತೋಳಗಳು ಏಕಾಏಕಿ ಕುರಿಗಳ ದಾಳಿ ಮಾಡಿವೆ.
ಏಕಾಏಕಿ ತೋಳಗಳು ದಾಳಿ ನಡೆಸಿದ್ದು, 15 ಕ್ಕೂ ಹೆಚ್ಚು ಕುರಿ ಹಾಗೂ ಮರಿಗಳು ಸಾವನ್ನಪ್ಪಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.
ಆರ್ಥಿಕ ನಷ್ಟ ಅನುಭವಿಸಿದ ಕುರಿ ಮಾಲಿಕ ವೆಂಕಪ್ಪ ಬೆನಕನಹಳ್ಳಿ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಪೊಲೀಸರಿಗೆ ತಿಳಿಸಲಾಗಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…