ಕುಸನೂರ ವಸತಿ ಯೋಜನೆ: ಅರ್ಜಿಗಳನ್ನು ಸ್ವೀಕರಿಸುವ ಅವಧಿ ವಿಸ್ತರಣೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಕುಸನೂರ ನೂತನ ವಸತಿ ಯೋಜನೆಯಲ್ಲಿ ವಿವಿಧ ಅಳತೆಗಳ ನಿವೇಶನಗಳ ಹಂಚಿಕೆ ಮಾಡುವಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಭರ್ತಿ ಮಾಡಿದ ಅರ್ಜಿ ಸ್ವೀಕರಿಸುವ ಕೊನೆಯ ದಿನವನ್ನು 2021ರ ಸೆಪ್ಟೆಂಬರ್ 14 ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

ಇದಲ್ಲದೇ ಸಾರ್ವಜನಿಕರಿಗೆ ಅರ್ಜಿ ವಿತರಿಸುವ ಕೊನೆಯ ದಿನಾಂಕವನ್ನು ಸಹ 2021ರ ಆಗಸ್ಟ್ 24ರವರೆಗೆ ವಿಸ್ತರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಇನ್ನುಳಿದ ಷರತ್ತು ಮತ್ತು ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕರನ್ನು ಕಚೇರಿ ಅವಧಿಯಲ್ಲಿ ಹಾಗೂ ಮೊಬೈಲ್ ಸಂಖ್ಯೆ 9591499501ಗೆ ಸಂಪರ್ಕಿಸಲು ಕೋರಲಾಗಿದೆ.

ಈ ಹಿಂದೆ ಅರ್ಜಿ ವಿತರಿಸುವ ಕೊನೆಯ ದಿನಾಂಕವನ್ನು ಜೂನ್ 22 ರಿಂದ ಜುಲೈ 20 ರವರೆಗೆ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 24ರ ಸಂಜೆ 5ಗಂಟೆಯವರೆಗೆ ನಿಗದಿಪಡಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420