ಕಲಬುರಗಿ: ಹೈವೇಯಲ್ಲಿ ರಾಬರಿ ಮಾಡುತ್ತಿದ್ದ ವೇಳೆ ಬಂಧಿಸಿ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿರುವ ಘಟನೆ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹೈದ್ರಾಬಾದ್ ಮೂಲದ ಚಂದ್ರು (30) ಎಂಬಾತ ಪೊಲೀಸ್ ವಶದಲ್ಲಿ ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ.
ಸದ್ಯ ಚಂದ್ರ ಕಲಬುರಗಿ ನಗರದ ಪೂಜಾ ಕಾಲೋನಿಯಲ್ಲಿ ವಾಸವಾಗಿದ್ದ. ಹೈವೆನಲ್ಲಿ ರಾಬರಿ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು.
ಈ ವೇಳೆ ಇನ್ನೊರ್ವ ಆರೋಪಿ ಮಹೇಶ್ ಎಂಬಾತ ಪರಾರಿಯಾಗಿದ್ದ, ಆರೋಪಿ ಚಂದ್ರುವನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತಿತ್ತು. ಈ ವೇಳೆ ಅಸ್ವಸ್ಥಗೊಂಡ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ಈತನ ಸಾವು ಲಾಕಪ್‌ಡೆತ್ ಅಥವಾ ಆಕಸ್ಮಿಕವೇ ಎಂಬುದನ್ನು ಪತ್ತೆ ಮಾಡಲು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಎಸಿಪಿ ಗಿರೀಶ್ ನೇತೃತ್ವದಲ್ಲಿ ತನಿಖೆ ಕೂಡಾ ಆರಂಭವಾಗಿದ್ದು, ತನಿಖೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…