ಪ್ರತಿಭೆ ಹೊರ ಹೊಮ್ಮಲು ಪ್ರೋತ್ಸಾಹ ಅಗತ್ಯ: ಪಟ್ಟದ್ದೇವರು

ಭಾಲ್ಕಿ: ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆ, ಜಾಣತನ, ಕಲ್ಪನಾ ಶಕ್ತಿ ಅಡಗಿದೆ. ಶಿಕ್ಷಕರು, ಪಾಲಕರು, ಸಮಾಜ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ್ದಲ್ಲಿ ಹೆಚ್ಚಿನ ಸಾಧನೆಗೆ ಸಹಕಾರಿ ಆಗುತ್ತದೆ ಎಂದು ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಪಡೆದ ಅಪರಾಜಿತೇಶ್ವರಿ ಸೂರ್ಯಕಾಂತ, ಆಶೀಷ ಬಸವರಾಜ ಮೊಳಕೀರೆ ಅವರನ್ನು ದಿ.ಜೆ.ಎಚ್‌.ಪಟೇಲ ಅಭಿಮಾನಿ ಸಂಘದ ಅಧ್ಯಕ್ಷ ಶಾಂತಯ್ಯ ©. ಸ್ವಾಮಿ ವತಿಯಿಂದ ತಲಾ 7,500 ಸಾವಿರ ರೂಪಾಯಿ ನಗದು ಬಹುಮಾನ ನೀಡಿ ಮಾತನಾಡಿದರು.

ಸಮಾಜಮುಖಿ ಕಾರ್ಯಗಳು ವ್ಯಕ್ತಿಯನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತವೆ. ಶಾಂತಯ್ಯ ©.ಸ್ವಾಮಿ ಅವರು ಪ್ರತಿವರ್ಷ ಹತ್ತನೇ ತರಗತಿಯಲ್ಲಿ ಅಪ್ರತಿಮ ಸಾಧನೆಗೈಯುವ ವಿದ್ಯಾರ್ಥಿಗಳಿಗೆ 15000/- ನಗದು ಪುರಸ್ಕಾರ ನೀಡಿ ವಿದ್ಯಾರ್ಥಿಗಳ ಹೆಚ್ಚಿನ ಸಾಧನೆಗೆ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದೆ. ಶಿಕ್ಷಣ, ಸದ್ಗುಣ ಮಾನವರನ್ನು ಮಹಾ ಮಾನವರನ್ನಾಗಿಸುತ್ತವೆ. ಹಾಗಾಗಿ, ಎಲ್ಲರೂ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ರಾಷ್ಟ್ರದ ಸತ್ಪ್ರಜೆಗಳಾಗಬೇಕು ಎಂದು ತಿಳಿ ಹೇಳಿದರು.

ಬಸವಕಲ್ಯಾಣದ ಶಾಸಕ ಶರಣು ಸಲಗರ್‌ಮಾತನಾಡಿದರು. ಹಾಸ್ಯ ಕಲಾವಿದ ನವಲಿಂಗ ಪಾಟೀಲ, ದಿ.ಜೆ.ಎಚ್‌.ಪಟೇಲ ಅಭಿಮಾನಿ ಸಂಘದ ಅಧ್ಯಕ್ಷ ಶಾಂತಯ್ಯ ©. ಸ್ವಾಮಿ, ಲಿಂಗರಾಜ ಶಾಶೆಟ್ಟೆ, ಸದಾನಂದ ಪಾಟೀಲ, ರತಿಕಾಂತ ಕೊಹಿನೂರ್‌, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420