ಯಾದಗಿರಿ: ಹಬ್ಬದ ದಿನದಂದೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಕೊಲೆ

0
151

ಯಾದಗಿರಿ: ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ವ್ಯಕ್ತಿ ಓರ್ವನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ನಸುಕಿನ ಜಾವ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಗಿ ಗ್ರಾಮದ ನಿವಾಸಿ ಖಾಸೀಮ್ ಚೌಧರಿ (37) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಬಕ್ರೀದ್ ಹಬ್ಬದ ದಿನವಾದ ಇಂದು ನಸುಕಿನ ಜಾವ ಗ್ರಾಮದ ಬಸ್ ನಿಲ್ದಾಣ ಹತ್ತಿರ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಸದ್ಯ ಕೊಲೆಗೆ‌‌ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಗೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here