ಚಿತ್ತಾಪುರ:ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ವಿವಿಧ ಅಡಿಗಲ್ಲು ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ವಾಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ಆರೋಪಿಸಿದ್ದಾರೆ.
ಪಟ್ಟಣದ ಸಾಹೇಬ್ ಫಂಕ್ಷನ್ ಹಾಲ್ ನಲ್ಲಿ ಲೋಕೋಪಯೋಗಿ ಇಲಾಖೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2018-19 ನೇ ಎಸ್‌ಸಿ/ ಎಸ್ ಟಿ ಕಾಲೋನಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಮತ್ತು 2020-21ರ ಸಾಲಿನ 15ನೇ ಹಣಕಾಸು ಎಸ್ ಎಫ್ ಸಿ ಯೋಜನೆಯಡಿಯಲ್ಲಿ ರೂ 8.29 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಸಂಪೂರ್ಣ ಕಾಂಗ್ರೆಸ್ ಪಕ್ಷದ ವೇದಿಕೆಯಾಗಿ ಮಾರ್ಪಟ್ಟಿದ್ದು ಇಂದು ಕಂಡುಬಂದಿದೆ.
ಸಮಾರಂಭದಲ್ಲಿ ಬಿಜೆಪಿ ಪಕ್ಷದ ಪುರಸಭೆ ವಿರೋಧ ಪಕ್ಷದ ನಾಯಕರಾದ ಭೀಮಶಾ ಜೀರೊಳ್ಳಿ ಅವರು ಆಕ್ಷೇಪಣೆ ವ್ಯಕ್ತಪಡಿಸಿದರು
ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹಾಗೂ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಬುಬ್ ಸಾಬ,ಮುಖಂಡರಾದ ಅಜೀಜ್ ಶೇಠ್ ಸೇರಿದಂತೆ ಇತರ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರ ಸಮ್ಮುಖದಲ್ಲಿ ವೇದಿಕೆಯನ್ನು ಅಲಂಕರಿಸಿ ಸರ್ಕಾರಿ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.
ಶಿಷ್ಟಾಚಾರ ಉಲ್ಲಂಘಿಸಿ, ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುತ್ತ ಜನಸಾಮಾನ್ಯರಿಗೆ ತಪ್ಪುದಾರಿಗೆಳೆಯುವ ಕೆಲಸ ಕಾಂಗ್ರೆಸ್ ಪಕ್ಷದ ಮುಖಂಡರು ಮಾಡುತ್ತಿದ್ದಾರೆ,ಸರ್ಕಾರಿ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಜನಸಾಮಾನ್ಯರಿಗೆ ಎತ್ತಿ ಕಟ್ಟುವಂತದ್ದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…