ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಹುನ್ನಾರವನ್ನು ಖಂಡಿಸಿ ಇಂದು ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ವೀರಶೈವ ಸಮಾಜದ ವತಿಯಿಂದ ಪ್ರತಿಭಟನಾ ಮೆರವಣಿಗೆ ಮಾಡಿ ಟೈರಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಮಾಜದ ಅಧ್ಯಕ್ಷ ಸಿದ್ದು ಅಂಗಡಿ ಕೇಂದ್ರ ಬಿಜೆಪಿ ನಾಯಕರು ಒಂದು ವೇಳೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಪಕ್ಷ ಮುಂದಿನ ಬಾರಿ ಮತ್ತೇ ಅಧಿಕಾರಕ್ಕೆ ಬರೋದಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಅವರು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ರಾಜ್ಯದಲ್ಲಿ ಈ ಮಟ್ಟಕ್ಕೆ ಬೆಳೆಸಿ ಅಧಿಕಾರಕ್ಕೆ ತಂದಿದ್ದಾರೆ.
ಆದರೆ ಕೆಲವರು ಅವರ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಆದ್ದರಿಂದ ಕೂಡಲೇ ವರಿಷ್ಠರು ಮದ್ಯ ಪ್ರವೇಶಿಸಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲವೆಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಸಮಾಜದ ಗೌರವಾಧ್ಯಕ್ಷ ಗುರುಲಿಂಗಯ್ಯ ಹಿರೇಮಠ ಮತ್ತು ಉಪಾಧ್ಯಕ್ಷರಾದ ಭಗವಂತರಾಯ ಶಿವಣ್ಣವರ ,ಸಂಗೂ ಹೂಗಾರ, ಕಾನೂನು ಸಲಹೆಗಾರ ಶಾಂತರಾಜ ಪಾಟೀಲ, ಪ್ರಧಾನ ಕಾರ್ಯದರ್ಶಿ ಅಶೋಕ ಪಾಟೀಲ ಕಾರ್ಯದರ್ಶಿ ಅನೀಲ ರಾಂಪೂರ, ಭಗವಂತರಾಯ ನೆಂಗಾ, ಅಶೋಕ ದಿವಾನಿ, ವಿಶ್ವ ಪಾಟೀಲ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಮಾಧ್ಯಮ ಸಲಹೆಗಾರ ವಿಜಯಕುಮಾರ ಪಾಟೀಲ, ಸಾಹೇಬಗೌಡ ಪಾಟೀಲ, ಪದಾಧಿಕಾರಿಗಳಾದ ಕೇದಾರಲಿಂಗಯ್ಯ ಹಿರೇಮಠ, ಸಿದ್ದು ಚಿನಗುಡಿ.ವಿಶಾಲ ಬಂಕೂರ, ಸಿದ್ದು ಸಾಹು ಗೋಗಿ, ಸಿದ್ದು ಸ್ಥಾವರಮಠ, ವಿಶ್ವರಾದ್ಯ ಗದ್ದಗಿ, aವೀರೂ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.