ಬಿಸಿ ಬಿಸಿ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಕ್ಕೆ ತಹಸೀಲ್ದಾರ,ಡಿಡಿಪಿಐ, ಶಿಕ್ಷಣಾಧಿಕಾರಿ ಬೇಟಿ

ಶಹಾಬಾದ: ನಗರದಲ್ಲಿ ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನಡೆದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ಸುರೇಶ ವರ್ಮಾ, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯಸ್ವಾಮಿ ರುದ್ನೂರ, ಜಿಲ್ಲಾ ಉಪನಿರ್ದೇಶಕ ಅಶೋಕ ಭಜಂತ್ರಿ ಅವರು ಬೇಟಿ ನೀಡಿ ವೀಕ್ಷಣೆ ಮಾಡಿದರು.

ಶಹಾಬಾದ ತಾಲೂಕಿನಲ್ಲಿ ಗಂಗಮ್ಮ ಎಸ್. ಮರಗೋಳ, ಬಾಲ ವಿದ್ಯಾ ಮಂದಿರ, ಎಸ್.ಜಿ.ವರ್ಮಾ, ಬಸವ ಸಮಿತಿ, ಎಮ್‌ಸಿಸಿ ಹಾಗೂ ಭಂಕೂರ ಸರಕಾರಿ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆದಿವೆ. ಆರು ಪರೀಕ್ಷಾ ಕೇಂದ್ರಗಳಿದ್ದು ಸುಮಾರು ೧೫೪೦ ಮಕ್ಕಳು ಪರೀಕ್ಷೆ ಬರೆದರು. ಪರೀಕ್ಷೆಯ ಕೊನೆಯ ದಿನವಾದ ಗುರುವಾರ ಎಲ್ಲಾ ಮಾಧ್ಯಮದ ೩ ಭಾಷಾ ವಿ?ಯಗಳ ಪರೀಕ್ಷೆಗಳು ಶಾಂತಿಯುತವಾಗಿ ಜರುಗಿತು.
ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ಸುರೇಶ ವರ್ಮಾ, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯಸ್ವಾಮಿ ರುದ್ನೂರ, ಡಿಡಿಪಿಐ ಭಜಂತ್ರಿ ಅವರು ಬೇಟಿ ನೀಡಿ ಪರಿಶೀಲಿಸಿದರು.

ಅಲ್ಲದೇ ಕೆಲವು ವಿದ್ಯಾರ್ಥಿಗಳು ಮಾಸ್ಕ್ ಧರಿಸದಿರುವುದನ್ನು ಕಂಡು ಪರೀಕ್ಷಾ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಸ್ಕ್ ಮೂಗಿನ ಕೆಳಗಡೆ ಹಾಕದೇ ಮೂಗಿನ ಮೇಲೆ ಹಾಕಿಕೊಂಡು ಪರೀಕ್ಷೆಗೆ ಬರೆಯಿರಿ.ಯಾವುದೇ ಭಯ ಬೇಡ.ಧೈರ್ಯದಿಂದ ಎದುರಿಸಿ ಎಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್ ಪರೀಕ್ಷಾ ಕೇಂದ್ರದ ಎಲ್ಲಾ ಶಿಕ್ಷಕರಿಗೆ, ಆಶಾ ಕಾರ್ಯಕರ್ತರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು.

ಪ್ರಾರಂಭದಲ್ಲಿ ಮುಖ್ಯಗೇಟನಲ್ಲೇ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ ಮಾಸ್ಕ್ ನೀಡಿ ಪರೀಕ್ಷಾ ಕೇಂದ್ರದ ಒಳಗೆ ಕಳುಹಿಸಲಾಗಿತ್ತು.
ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಾವಿತ್ರಿ ಪಾಟೀಲ, ಲಲಿತಾ, ಜಗನ್ನಾಥ, ವೆಂಕಟೇಶ ಚಿನ್ನೂರ್,ಶಿವಯೋಗಿ ಕಟ್ಟಿ, ಎಸ್.ಬಿ.ಪಾಟೀಲ, ವಿಶ್ವಾನಾಥ ಹೂಗಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

34 mins ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

37 mins ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

40 mins ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

45 mins ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

50 mins ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

55 mins ago