ಸುರಪುರ: ತಾಲೂಕಿನಾದ್ಯಂತ ಗುರುವಾರ ನಡೆದ ಎರಡನೇ ದಿನದ ಎಸ್ಎಸ್ಎಲ್ಸಿ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು.ತಾಲೂಕಿನಾದ್ಯಂತ ಎಲ್ಲಾ ೨೭ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮಗಳಡಿಯಲ್ಲಿ ಪರೀಕ್ಷೆಗೆ ಎಲ್ಲಾ ರೀತಿಯ ನೆರವು ನೀಡಲಾಯಿತು.
ಬೆಳಿಗ್ಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ವಿತರಣೆ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಯಿತು.ಅಲ್ಲದೆ ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಅಂತರದಲ್ಲಿ ಪರೀಕ್ಷೆಗೆ ಕುಳಿತುಕೊಂಡರು.ತಾಲೂಕಿನಾದ್ಯಂತ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ ೫೧೪೯ ವಿದ್ಯಾರ್ಥಿಗಳಿಗಾಗಿ ಒಟ್ಟು ೨೭ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.ಆದರೆ ೫೦೫೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,೯೬ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಕಮಿಷನರ್ ಭೇಟಿ: ಶಿಕ್ಷಣ ಇಲಾಖೆಯ ಕಲಬುರ್ಗಿ ವಿಭಾಗದ ಆಯುಕ್ತರಾದ ನಳಿನಕುಮಾರ ಅತುಲ್ ,ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಶಿಲ್ಪಾ ಶರ್ಮಾ ಹಾಗು ಶಿಕ್ಷಣ ಇಲಾಖೆಯ ರಾಜ್ಯ ನಿರ್ದೇಶಕ ಬಸವರಾಜ ಗೌನಳ್ಳಿಯವರು ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಗುರುಲಿಂಗಪ್ಪ ಸೇರಿದಂತೆ ಅನೇಕರಿದ್ದರು.
ಇನ್ನೂ ನಗರದ ಕೆಲ ಪರೀಕ್ಷಾ ಕೇಂದ್ರದ ಬಳಿಯಲ್ಲಿ ಆರೋಗ್ಯ ಇಲಾಖೆಯಿಂದ ಪರೀಕ್ಷೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಗಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಟಿಟಿ ಇಂಜೇಕ್ಷನ್ ವಿತರಣೆಯು ನಡೆಸಲಾಯಿತು.ಅಲ್ಲದೆ ಅನೇಕ ಜನ ಪೋಷಕರು ವಿದ್ಯಾರ್ಥಿಗಳಿಗೆ ಚುಚ್ಚುಮದ್ದು ಹಾಕಲು ವಿರೋಧ ವ್ಯಕ್ತಪಡಿಸುವ ಮೂಲಕ ಚಚ್ಚುಮದ್ದು ಹಾಕಿಸದೆ ಕರೆದುಕೊಂಡು ಹೋದರು.
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…