ಕಲಬುರಗಿ: ನಗರಪಾಲಿಕೆ ವತಿಯಿಂದ ವಿವಿಧ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕಂಪ್ಯೂಟರ್ ಹಾಗೂ ಗ್ಯಾಸ್ ಕಿಟ್ ಗಳನ್ನು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ ಹಾಗೂ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.
ಕಂಪ್ಯೂಟರ್, ಗ್ಯಾಸ್ ಕಿಟ್, ಮನೆ ಮೇಲಿನ ಕಬ್ಬಿಣದ ಮೇಲ್ಛಾವಣಿ ಹಾಗೂ ಕಸದ ಬುಟ್ಟಿಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಕೆಲ ಫಲಾನುಭವಿಗಳಿಗೆ ವಿತರಿಸಲಾಯಿತು.